ಜ.2ರಂದು ಪ್ರತಿಭಟನೆ
ಚಿಕ್ಕಮಗಳೂರು: ಕಡೂರು- ಚಿಕ್ಕಮಗಳೂರು ರೇಲ್ವೆ ಮಾರ್ಗದ ಬಳಿ ಸಾರ್ವಜನಿಕರ ಓಡಾಟಕ್ಕೆ ರಸ್ತೆ ನಿರ್ಮಾಣ ಮಾಡಿಕೊಡುವಲ್ಲಿ ರೇಲ್ವೆ ಇಲಾಖೆ ಮುಂದಾಗದೆ ಇರುವುದನ್ನು ಖಂಡಿಸಿ ಜ.2ರಂದು ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಎಚ್.ಕೆ. ಶಶಿಧರ್ ತಿಳಿಸಿದ್ದಾರೆ. ರಸ್ತೆಯನ್ನು ನಿರ್ಮಿಸುವ ಜವಾಬ್ದಾರಿಯಿಂದ ರೇಲ್ವೆ ಇಲಾಖೆ ನುಣುಚಿಕೊಂಡಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಜಮೀನಿನ ಮಧ್ಯ ಭಾಗದಲ್ಲಿ ರೈಲು ಹಳಿ ಹಾದು ಹೋಗಿದ್ದರಿಂದ ಜಮೀನುಗಳು ಇಬ್ಭಾಗವಾಗಿದ್ದು, ಇಲ್ಲಿ ಜನರಿಗೆ ಓಡಾಡಲು ತುಂಬಾ ತೊಂದರೆಯಾಗುತ್ತಿದೆ. ಈಗಾಗಲೇ ಗ್ರಾಮಸ್ಥರು, ರೇಲ್ವೆ ಎಂಜಿನಿಯರ್, ಸಂಸದರಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರೂ ಕ್ರಮ ಕೈಗೊಂಡಿಲ್ಲ. ಈ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಅಶ್ಲೀಲ ನೃತ್ಯ ಎಚ್ಚರಿಕೆ
ಚಿಕ್ಕಮಗಳೂರು: ಹೊಸ ವರ್ಷಾಚರಣೆ ಸಂಭ್ರಮಿಸುವ ನೆಪದಲ್ಲಿ ಹೋಟೆಲ್ ಹಾಗೂ ರೆಸಾರ್ಟ್ಗಳಲ್ಲಿ ಹಣ ಗಳಿಸುವ ಉದ್ದೇಶದಿಂದ ನಂಗಾ ನಾಚ್ ಮತ್ತು ಅಶ್ಲೀಲ ನೃತ್ಯ ಪ್ರದರ್ಶನ ನಡೆಸುವ ಬಗ್ಗೆ ಮಾಹಿತಿ ಬಂದಲ್ಲಿ ಕನ್ನಡ ಸೇನೆ ಕಾರ್ಯಕರ್ತರು ದಾಳಿ ನಡೆಸಬೇಕಾಗುತ್ತದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ. ರಾಜೇಗೌಡ ಎಚ್ಚರಿಸಿದ್ದಾರೆ. ನೂತನ ವರ್ಷಾಚರಣೆಗಳು ಸುಸಂಸ್ಕೃತವಾಗಿ ಆಚರಿಸುವ ಮೂಲಕ ಸಂಭ್ರಮಿಸಬೇಕು, ಅದನ್ನು ಹೊತುಪಡಿಸಿ ಇಂಗ್ಲಿಷ್ನ್ನು ವೈಭವೀಕರಿಸಿ ಕನ್ನಡವನ್ನು ಕಡೆಗಣಿಸಿರುವುದು ಕಂಡು ಬಂದರೆ ಅಂತಹ ನಾಮಫಲಕಗಳಿಗೆ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.