ಹೊಲಿಗೆ ಯಂತ್ರ ವಿತರಣೆ
ತರೀಕೆರೆ: ಸಮೀಪದ ಉಡೇವ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡದ 15 ಜನ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಬಿ. ಮಂಜಪ್ಪ ಅವರು ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿ, ಸರ್ಕಾರವು ಗ್ರಾಮೀಣ ಜನರ ಬದುಕನ್ನು ಹಸನುಗೊಳಿಸುವ ದೃಷ್ಟಿಯಿಂದ ವಿವಿಧ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕ ಒದಗಿಸುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಂಡು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕೆಂದು ತಿಳಿಸಿದರು.
ಗ್ರಾ.ಪಂ. ಉಪಾಧ್ಯಕ್ಷೆ ಕವಿತ ಶಿವಕುಮಾರ್, ಪಿಡಿಒ ಪಾರ್ವತಿ, ಸದಸ್ಯರಾದ ಮಂಜಪ್ಪ, ಓಂಕಾರಮೂರ್ತಿ, ಮಂಜು, ಮೂರ್ತಿ ಇತರರು ಇದ್ದರು.