ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಭಯಚಂದ್ರ ಜೈನ್ ವಿರುದ್ಧ ಪ್ರತಿಭಟನೆ

Vishwanath S
Updated On : 1 Jan 2014, 1:14 am

ಕ.ಪ್ರ.ವಾರ್ತೆ ,  ಚಿಕ್ಕಮಗಳೂರು ,  ಡಿ. 31
ಮೂಲ್ಕಿಯಲ್ಲಿ ಆಟೋ ಚಾಲಕರ ಮೇಲೆ ಹಲ್ಲೆಗೆ ಮುಂದಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ವಿರುದ್ಧ ನಗರದ ಆಟೋ ಚಾಲಕರು ಮತ್ತು ಮಾಲೀಕರು ಮಂಗಳವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಆಟೋ ಚಾಲಕರು ಹನುಮಂತಪ್ಪ ವೃತ್ತದಲ್ಲಿ ಅಭಯಚಂದ್ರ ಜೈನ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಆಟೋ ಚಾಲಕರ ಸಂಘದ ಉಪಾಧ್ಯಕ್ಷ ಬಸವರಾಜ್, ರಸ್ತೆಯ ದುರಸ್ತಿಗೆ ಆಗ್ರಹಿಸಿ ಮೂಲ್ಕಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಆಟೋ ಚಾಲಕರ ಮತ್ತು ಮಾಲೀಕರ ಮೇಲೆ ಸಚಿವರು ಹಲ್ಲೆಗೆ ಮುಂದಾಗಿರುವುದು ಖಂಡನೀಯ. ಸಮಸ್ಯೆ ಇದ್ದಾಗ ಅದನ್ನು ಪ್ರತಿಭಟನೆಯ ಮೂಲಕ ವ್ಯಕ್ತಪಡಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ, ಅದನ್ನು ತಡೆಯುವ ಕೆಲಸವನ್ನು ಸಚಿವರು ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಆಟೋ ಚಾಲಕರುಗಳಾದ ಪಾಪಣ್ಣ, ನಂಜುಂಡಿ, ರಾಮು, ಮಧು ಹಾಗೂ ಚಾಲಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement