ರೈತರ ಪರ ಹೋರಾಡಿ
ಕಡೂರು: ರೈತರ ಹಿತಕ್ಕಾಗಿ ಸ್ಥಾಪನೆಯಾದ ತಾಲೂಕು ಕೃಷಿಕ ಸಮಾಜವು ತಾಲೂಕಿನ ರೈತರ ಪರವಾಗಿ ಹೋರಾಡುವ ಮೂಲಕ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ರೀತಿಯಲ್ಲಿ ಕಾರ್ಯ ಪ್ರವೃತ್ತವಾಗಬೇಕು ಎಂದು ಶಾಸಕ ಡಾ. ವೈ.ಸಿ. ವಿಶ್ವನಾಥ್ ಹೇಳಿದರು.
ಅವರು ಕಡೂರು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ತಾಲೂಕು ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಬರಗಾಲ ಆವರಿಸಿರುವುದರಿಂದ ಅನ್ನ ಕೂಡುವ ರೈತರ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ರೈತರ ಸಮಸ್ಯೆ ಬಗ್ಗೆ ಗಮನ ಹರಿಸಬೇಕಿದೆ ಎಂದರು.
ಏಕೈಕ ಸರ್ಕಾರ: ನಮ್ಮ ಸರ್ಕಾರವು ರೈತರ ಪರವಾದ ಬಜೆಟ್ಟನ್ನು ನೀಡಿದ ಏಕೈಕ ಸರ್ಕಾರವಾಗಿದೆ. ರೈತರಿಗಾಗಿ ಬಡ್ಡಿ ರಹಿತ ಸಾಲ, ಬೀಜ, ಗೊಬ್ಬರ ನೀಡುವಿಕೆ, ರೈತರ ಸಾಲಮನ್ನಾದಂತಹ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.
ತಾಲೂಕು ಕೃಷಿಕ ಸಮಾಜ ರೈತರ ಹಿತಕ್ಕಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಮಾಜದ ಪದಾಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಬಹುದಿನಗಳ ಬೇಡಿಕೆಯಾಗಿರುವ ತಾಲೂಕು ಕೃಷಿಕ ಸಮಾಜದ ಕಟ್ಟಡ ಇಂದು ರೈತರಿಗೆ ಅರ್ಪಣೆಯಾಗುತ್ತಿದ್ದು, ಕೃಷಿಕ ಸಮಾಜದ ಬಂಧುಗಳು ರೈತರ ಉಪಯೋಗಕ್ಕಾಗಿ ಹಾಗೂ ಕೃಷಿಕ ಸಮಾಜದ ಕಾರ್ಯಚಟುವಟಿಕೆಗಳಿಗೆ ಮೀಸಲಾಗಿಟ್ಟುಕೊಂಡು ರೈತರ ಏಳಿಗೆಗೆ ಶ್ರಮಿಸಬೇಕು ಎಂದರು.
ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾಗರಾಜ್ ಮಾತನಾಡಿ, ತಾಲೂಕು ಕೃಷಿಕ ಸಮಾಜ ಭವನ ಕಟ್ಬಬೇಕೆಂಬ ಕನಸು ನನಸಾಗುವ ಮೂಲಕ ರೈತರ ಕಲ್ಯಾಣಕ್ಕಾಗಿ ಅರ್ಪಿಸಲಾಗುತ್ತಿದೆ ಎಂೈದರು.
ಜಿಪಂ ಸದಸ್ಯ ಕಲ್ಮರುಡಪ್ಪ, ಎಪಿಎಂಸಿ ಅಧ್ಯಕ್ಷ ಚಿಕ್ಕದೇವನೂರು ರವಿ, ಉಪಾಧ್ಯಕ್ಷ ಕೃಷ್ಣಮೂರ್ತಿ, ಕೃಷಿಕ ಸಮಾಜದ ನಿರ್ದೇಶಕ ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್, ಪಂಚನಹಳ್ಳಿ ಸತೀಶ್, ಈಶ್ವರಪ್ಪ, ಡಿಸಿಎನ್ ಶೇಖರಪ್ಪ, ಸದಾಶಿವ ಮೊದಲಾದವರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.