ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸವಲ್ಲ

Mainashree
Updated On : 3 Feb 2013, 12:04 pm

ಶೃಂಗೇರಿ: ಶಿಕ್ಷಣವೆಂದರೆ ಕೇವಲ ಅಕ್ಷರಭ್ಯಾಸವಲ್ಲ. ಪಠ್ಯಚಟುವಟಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವುದೇ ನಿಜವಾದ ಶಿಕ್ಷಣ. ಪಠ್ಯೇತರ ಚಟುವಟಿಕೆಗಳು ಪ್ರತಿಭೆಗಳಿಗೆ ವೇದಿಕೆಯಾಗಿವೆ ಎಂದು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
  ಅವರು ಶನಿವಾರ ತಾಲೂಕಿನ ವಿದ್ಯಾರಣ್ಯಪುರ ಪಂಚಾಯಿತಿ ದುರ್ಗಾದೇವಸ್ಥಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆದ 2013 ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಹಣಗಳಿಕೆಯ ಅಸ್ತ್ರವಾಗಬಾರದು. ವಿದ್ಯಾರ್ಥಿಗಳಿಗೆ ಇಂದು ಬದುಕಿನ ಶಿಕ್ಷಣದ ಅನಿವಾರ್ಯತೆಯಿದೆ ಎಂದವರು ಈ ಸಂದರ್ಭದಲ್ಲಿ ಹೇಳಿದರು.
  ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿಕುಮಾರ್, ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್, ತಾ ಪಂ ಉಪಾಧ್ಯಕ್ಷೆ ಪುಷ್ಪಾ ಲಕ್ಷ್ಮಿನಾರಾಯಣ, ನೂತನ ಕುಮಾರ್, ನರೇಂದ್ರ ಹೆಗ್ಡೆ, ಶಿವಶಂಕರ್, ಎಂ.ಎಚ್.ನಟರಾಜ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement