ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ಕನಕ ಜಯಂತಿ

Lingaraj Badiger
Updated On : 5 Feb 2013, 10:55 am

ನರಸಿಂಹರಾಜಪುರ: ತಾಪಂ ಕಚೇರಿ ಸಭಾಂಗಣದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮವು ಫೆ.5ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಡಿ.ಎನ್. ಜೀವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಪಂ ಅಧ್ಯಕ್ಷ ನಾಗರಾಜ್ ಮತ್ತಿತರರು ಉಪಸ್ಥಿತರಿರುವರು. ಕನಕದಾಸರ ಕುರಿತು ಉಪನ್ಯಾಸ ನಡೆಯಲಿದೆ.
ಧಾರ್ಮಿಕ ಕೇಂದ್ರದಿಂದ ಶಾಂತಿ, ನೆಮ್ಮದಿ ಪ್ರಾಪ್ತಿ
ಶೃಂಗೇರಿ: ಮನುಷ್ಯನಿಗೆ ಜೀವನದಲ್ಲಿ ಶಾಂತಿ, ನೆಮ್ಮದಿ, ಮನಸ್ಸಿಗೆ ಏಕಾಗ್ರತೆ ಮೂಡಿಸುವ ಏಕೈಕ ಕೇಂದ್ರಗಳೆಂದರೆ ಧಾರ್ಮಿಕ ಕೇಂದ್ರಗಳಾಗಿವೆ. ಇಂತಹ ಧಾರ್ಮಿಕ ಕೇಂದ್ರಗಳ ಜೀರ್ಣೋದ್ದಾರ ಮಾಡುವ ಕಾರ್ಯ ಪುಣ್ಯದ ಕಾರ್ಯ. ಇಂತಹ ಕಾರ್ಯಗಳಿಂದ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಚೇಲಕ್ಕಾಡ್ ಅಸ್ಸಯೀದ್ ಇಬ್ನು ಮೌಲಾನ ತಂಗಳ್ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಅಲ್ ಬದ್ರಿಯಾ ಜುಮಾ ಮಸೀದಿಯ ನವೀಕರಣ ಕಟ್ಟಡವನ್ನು ಉದ್ಧಾಟಿಸಿ ಮಾತನಾಡಿ, ಸಮಾಜದಲ್ಲಿ ಶಾಂತಿಯ ವಾತಾವರಣ ನಿರ್ಮಿಸುವ ಕೆಲಸ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಮೂಳೂರು ಉಪ್ಪಾಪ ಮೌಲಾನ ಅಬ್ದುಲ್ ಜಬ್ಬಾರ್ ಮಸ್ತಾನ್, ಮೂಳೂರು ಅಬ್ದಲ್ ರೆಹಮಾನ್ ಮದನಿ, ನಾರ್ವೆಯ ರಫಿಕ್‌ಫೈಜಿ, ಅಬ್ದುಲ್ ಲತೀಫ್ ಮದನಿ ಇದ್ದರು.
ಪ್ರಬಲ ಪಕ್ಷವಾಗಿ ಕೆಜೆಪಿ: ಶಶಿಧರ್
ಕಡೂರು: ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿ ಪ್ರಬಲ ಪಕ್ಷವಾಗಿ ಹೊರಹೊಮ್ಮುತ್ತಿದ್ದು, ಸಾವಿರಾರು ಕಾರ್ಯಕರ್ತರು ಸದಸ್ಯತ್ವ ನೊಂದಾವಣೆ ಪಡೆಯುತ್ತಿದ್ದಾರೆ ಎಂದು ತಾಲೂಕು ಕೆಜೆಪಿ ಮುಖ್ಯ ಸಂಚಾಲಕ ಕಾಮನಕೆರೆ ಶಶಿಧರ್ ಹೇಳಿದ್ದಾರೆ.  ಈ ಬಗ್ಗೆ ಹೇಳಿಕೆ ನೀಡಿ, ತಾವು ಕ್ಷೇತ್ರದಾದ್ಯಂತ ಪ್ರವಾಸ ಮಾಡುತ್ತಿದ್ದು, ಬೇರೆ ಕಡೆಯಿಂದ ಪಕ್ಷಕ್ಕೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.
ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ: ಕಸ್ತೂಬಾರಿ ಬಾ ಆಸ್ಪತ್ರೆ ಮಣಿಪಾಲ್ ಮತ್ತು ಬಾಪೂಜಿ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ಫೆ.10ರಂದು ಬೆಳಗ್ಗೆ 9ರಿಂದ ಸಂಜೆ 4ಗಂಟೆಯವರೆಗೆ ನಗರದ ಸವಳಂಗ ರಸ್ತೆಯ ಕೃಷಿ ವಿಶ್ವವಿದ್ಯಾನಿಲಯದ ಎದುರಿನಲ್ಲಿರುವ ಬಾಪೂಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.ಈ ಆರೋಗ್ಯ ತಪಾಸಣಾ ಶಿಬಿರವನ್ನು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಉದ್ಘಾಟಿಸುವರು. ಮಣಿಪಾಲ ವಿವಿ ಕುಲಾಧಿಪತಿ ಪದ್ಮಭೂಷಣ ಡಾ. ರಾಮದಾಸ ಎಂ. ಪೈ,  ಡಾ.ಎಚ್.ಎಸ್. ಬಲ್ಲಾಳ್ ಹಾಗೂ ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಆರಾಧ್ಯ ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement