ಇಂದಿನಿಂದ ಬಿಲ್ಡ್ ಟೆಕ್- 2013 ವಸ್ತು ಪ್ರದರ್ಶನ
ಚಿಕ್ಕಮಗಳೂರು: ಮನೆ ಹಾಗೂ ಇತರ ಕಟ್ಟಡ ನಿರ್ಮಾಣ ಮಾಡುವವರಿಗೆ ಅದಕ್ಕೆ ಬಳಸುವ ಸಾಮಾಗ್ರಿಗಳ ಪರಿಚಯ, ಉಚಿತ ಸಲಹೆ, ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ಬೆಂಗಳೂರಿನ ಯುಎಸ್ ಕಮ್ಯುನಿಕೇಷನ್ಸ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಫೆ.8ರಿಂದ ಮೂರು ದಿನಗಳ ಕಾಲ ಬಿಲ್ಡ್ ಟೆಕ್- 2013 ವಸ್ತು ಪ್ರದರ್ಶನ ಹಮ್ಮಿಕೊಂಡಿದೆ.
ಫೆ.8ರಂದು ಮಧ್ಯಾಹ್ನ 12 ಗಂಟೆಗೆ ಎಐಟಿ ಪ್ರಾಂಶುಪಾಲರಾದ ಡಾ.ಸಿ.ಕೆ. ಸುಬ್ರಾಯ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ.ಬಿ. ಹೇಮಂತಪ್ರಭು ಅವರು ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ಸ್ ಅಧ್ಯಕ್ಷ ಕೆ.ಎನ್. ದೊಡ್ಡೇಗೌಡ, ಎಂಜಿನಿಯರ್ ಎಂ.ಎ. ನಾಗೇಂದ್ರ, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಮುಖ್ಯಸ್ಥ ಎಸ್.ವಿ. ಪಾಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಯುಎಸ್ ಕಮ್ಯುನಿಕೇಷನ್ಸ್ನ ಪಾಲುದಾರರಾದ ಉಮಾಪತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರದರ್ಶನವನ್ನು ಅಲ್ಟ್ರಾಟೆಕ್ ಸಿಮೆಂಟ್ ಪ್ರಾಯೋಜಿಸಿದ್ದು ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟದ 75ಕ್ಕೂ ಹೆಚ್ಚು ಕಂಪನಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ. ಕಟ್ಟಡಗಳಿಗೆ ಅಗತ್ಯವಿರುವ ಎಲ್ಲಾ ಸಾಮಾಗ್ರಿಗಳನ್ನು ಸಾರ್ವಜನಿಕರು ವೀಕ್ಷಿಸಬಹುದು ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.