ಇಂದು ಹಾಸ್ಯ ಸಿಂಚನ
ಶೃಂಗೇರಿ: ಪಟ್ಟಣದ ಶ್ರೀ ಜೆಸಿಬಿಎಂ ಕಾಲೇಜಿನಲ್ಲಿ ಕಲಾ ಸಂಘದ ಆಶ್ರಯದಲ್ಲಿ ಸ್ಥಳೀಯ ಹಾಸ್ಯ ಕಲಾವಿದರಿಂದ ಹಾಸ್ಯ ಸಿಂಚನ ಕಾರ್ಯಕ್ರಮ ನಡೆಯಲಿದೆ. ಇಲ್ಲಿನ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಲಾವಿದ ಜಮಾಲ್ ಸಾಬ್ ಉದ್ಘಾಟಿಸಲಿದ್ದಾರೆ. ಕಲಾ ಸಂಘದ ಅಧ್ಯಕ್ಷ ರಾಮ್ ಪ್ರಸಾದ್, ಕೇಶವ್,ಪ್ರಾಣೇಶ್ ಮತ್ತಿತರರು ಪಾಲ್ಗೊಳ್ಳಿದ್ದಾರೆ. ಪ್ರಾಚಾರ್ಯ ಹೆಚ್.ಸಿ. ವೀರಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಅಕ್ಷತಾರಾಜ್ಗೆ ಪ್ರಥಮ
ತರೀಕೆರೆ: ಶೃಂಗೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ, ಚಿತ್ರಕಲಾ ವಿಭಾಗದಲ್ಲಿ ಸಮೀಪದ ಲಕ್ಕವಳ್ಳಿ ಪೂರ್ಣಚಂದ್ರ ಹಿ.ಪ್ರಾ ಶಾಲೆಯ 2ನೇ ತರಗತಿಯ ಎ.ಎಸ್. ಅಕ್ಷತಾರಾಜ್ಗೆ ಪ್ರಥಮ ಸ್ಥಾನ, 7ನೇ ತರಗತಿಯ ದಸ್ತಗೀರ್ ಫಯಾಜ್ ಅವರು ದ್ವಿತೀಯ ಸ್ಥಾನ ಗಳಿಸಿ ಲಕ್ಕವಳ್ಳಿ ಗ್ರಾಮಕ್ಕೆ ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ಪರಮೇಶ್ವರಪ್ಪ, ಶಾಲೆ ಕಾರ್ಯದರ್ಶಿ ಎಲ್.ಎಸ್. ರಂಗನಾಥ್, ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ದೇವರಾಜ್, ಶಾಲೆ ಶಿಕ್ಷಕ ವೃಂದದವರು ಪೋಷಕರು ವಿಜೇತರನ್ನು ಅಭಿನಂದಿಸಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆ
ನರಸಿಂಹರಾಜಪುರ: ತಾಲೂಕಿನ ಮುತ್ತಿನಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಪಾಜಿಲ್ ಹಾಗೂ ಜೈಸನ್ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಅಂಗವಿಕಲರ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಬಿ. ಲಿಂಗಪ್ಪ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ನಡೆ ಜಿಲ್ಲಾ ಮಟ್ಟದ ಅಂಗವಿಕಲರ ಮಕ್ಕಳ ಕ್ರೀಡಾ ಕೂಟದಲ್ಲಿ ಕಿವುಡರ ಹಾಗೂ ಅಂದ ಮಕ್ಕಳ ವಿಭಾಗದಲ್ಲಿ ಈ ಇಬ್ಬರೂ ವಿದ್ಯಾರ್ಥಿಗಳು ಗುಂಡು ಎಸೆತ, ಭರ್ಜಿ ಎಸೆತ ಹಾಗೂ 50 ಮೀಟರ್ ಓಟದ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.