ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾಡ್ಗಿಚ್ಚಿನಿಂದ ಅರಣ್ಯ ಸಂರಕ್ಷಣೆಗೆ ಮನವಿ

Parashurama
Updated On : 8 Feb 2013, 10:02 am

ನರಸಿಂಹರಾಜಪುರ: ಬೇಸಿಗೆ ಸಮೀಪಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಡ್ಗಿಚ್ಚಿನಿಂದ ಅರಣ್ಯ ಹಾಗೂ ವನ್ಯಜೀವಿಗಳನ್ನು ರಕ್ಷಿಸಿಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.
   ಅರಣ್ಯ ಸಂಪನ್ಮೂಲಗಳ ನೇರ ಫಲಾನುಭವಿಗಳು ಸ್ಥಳೀಯರು. ಅರಣ್ಯ ಇಲಾಖೆಯೊಂದಿಗೆ ಈ ಸಂಪನ್ಮೂಲಗಳ ಸಂರಕ್ಷಣೆ ಜವಬ್ದಾರಿಯಲ್ಲಿ ಸ್ಥಳೀಯರು ಪಾಲುದಾರರಾಗಬೇಕು. ಆಗ ಮಾತ್ರ ಅರಣ್ಯ ಸಂಪತ್ತಿನ ಸಂರಕ್ಷಣೆ ಸಮರ್ಪಕವಾಗಿ ನಡೆಯುತ್ತದೆ. ಈ ಸಾಮಾಜಿಕ ಹೊಣೆಗಾರಿಕೆಯ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಚಿಸಲಾದ ಗ್ರಾಮ ಅರಣ್ಯ ಸಮಿತಿಗಳ ಪಾತ್ರವು ಅರಣ್ಯ ಸಂಪನ್ಮೂಲಗಳ ರಕ್ಷಣೆಯಲ್ಲಿ ಹಿರಿದಾಗಿದೆ ಎಂದರು.
ಅಭಿನಂದನೆ: ಕಳೆದ 4-5 ವರ್ಷಗಳಿಂದ ಗ್ರಾಮ ಅರಣ್ಯ ಸಮಿತಿಗಳ ಹಾಗೂ ಸಾರ್ವಜನಿಕರ ಸಹಕಾರದಿಂದ ಕಾಡಿಗೆ ಬೆಂಕಿ ಬೀಳುವುದನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಹೀಗೆ ತಡೆಹಿಡಿದಿದ್ದರಿಂದ ಆಗಬಹುದಾದ  ಬಹು ದೊಡ್ಡ ಅನಾಹುತ ತಪ್ಪಿಸಿದಂತಾಗಿದೆ.ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯರು ಕಾಡಿನ ಬೆಂಕಿಯನ್ನು ತಡೆಗಟ್ಟಲು ತೋರಿಸಿದ ಕಾಳಜಿಗಾಗಿ ಅರಣ್ಯ ಇಲಾಖೆ ಅಭಿನಂದಿಸುತ್ತದೆ.    ಇದೇ ರೀತಿಯ ಸಹಕಾರವನ್ನು ಮುಂದೆ ಸಹ ನಿರೀಕ್ಷಿಸಲಾಗಿದೆ ಎಂದು ಹೇಳಿದರು.
ಸೂಕ್ತ ಪ್ರೋತ್ಸಾಹ: ಅರಣ್ಯ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವುವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು. ಅಂತಹ ಮಾಹಿತಿದಾರರಿಗೆ ಸೂಕ್ತ ಪ್ರೋತ್ಸಾಹ ಧನ ನೀಡಲಾಗುವುದು ಎಂದು ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಹಾಗೂ ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
  ಸಾರ್ವಜನಿಕರು ಸಂಪರ್ಕಿಸಬಹುದಾದ ಅರಣ್ಯಾಧಿಕಾರಿಗಳ ದೂರವಾಣಿ ಸಂಖ್ಯೆಗಳು- ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿಗಳು- 9480807675, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿಗಳು-  08266 220106, 9480807676. ಬಾಳೆಹೊನ್ನೂರು ವಲಯ ಅರಣ್ಯಾಧಿಕಾರಿಗಳು- 08266 250550, 9480807677.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments