ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗೂಡಂಗಡಿ ಮೇಲೆ ಪೊಲೀಸ್ ದಾಳಿ

Parashurama
Updated On : 8 Feb 2013, 10:03 am

ಚಿಕ್ಕಮಗಳೂರು: ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟವನ್ನು ನಿಷೇಧ ಮಾಡುವಂತೆ ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ.
- ಈ ಮಾತು ಚಿಕ್ಕಮಗಳೂರು ಜಿಲ್ಲೆಗೂ ಅನ್ವಯವಾಗಲಿದೆ.
ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ನೆಲೆವೂರಿರುವ ಗೂಡಾಂಗಡಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಬಹಿರಂಗವಾಗಿ ನಡೆಯುತ್ತಿದೆ. ಇದನ್ನು ತಡೆಯುವ ಕೆಲಸ ಈವರೆಗೆ ಯಾವುದೇ ಸಂಬಂಧಪಟ್ಟ ಇಲಾಖೆಯಿಂದ ನಡೆಯುತ್ತಿರಲಿಲ್ಲ.
ಇತ್ತೀಚಿನ ದಿನಗಳಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಿಗಳಾಗಿದ್ದಾರೆ. ಪೋಷಕರ ಕಣ್ಣು ತಪ್ಪಿಸಿ ಗೂಡಂಗಡಿಗಳ ಬಳಿ ಸಾರ್ವಜನಿಕವಾಗಿ ನಿಂತು ಸಿಗರೇಟು ಸೇವನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಿಗಳಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಆದರೆ, ಪರಿಣಾಮಕಾರಿಯಾಗಿ ಜಾರಿಗೆ ಬಂದಿರುವುದಿಲ್ಲ.
  ಮಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಮಾದಕ ವಸ್ತುಗಳ ವ್ಯಸನಿಯಾಗಿದ್ದು, ತಾಯಿ ಮಾದಕ ವಸ್ತುಗಳ ಖರೀದಿಗೆ ಹಣ ನೀಡದೆ ಇದ್ದರಿಂದ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ ಇದರ ಬಗ್ಗೆ ಜಾಗೃತಗೊಂಡಿದೆ. ಇಲ್ಲಿನ ಐಡಿಎಸ್‌ಜಿ ಕಾಲೇಜು ಹಾಗೂ ಆಶೀರ್ವಾದ ವೃತ್ತ ಸೇರಿದಂತೆ ಹಲವೆಡೆ ಜಿಲ್ಲಾ ರಕ್ಷಣಾಧಿಕಾರಿ ಎನ್. ಶಶಿಕುಮಾರ್ ನಿರ್ದೇಶನದ ಮೇರೆಗೆ ಪೊಲೀಸರು ದಾಳಿ ನಡೆಸಿದರು.
150 ಪ್ರಕರಣ ದಾಖಲು: ಶಾಲಾ, ಕಾಲೇಜುಗಳ ಬಳಿ ಗೂಡಾಂಗಡಿಗಳಲ್ಲಿ ಮಾದಕ ದ್ರವ್ಯ ಸೇರಿದಂತೆ  ತಂಬಾಕಿನ ಮಾರಾಟ ಹೆಚ್ಚಾಗುತ್ತಿದೆ. ಇವುಗಳ ಸೇವನೆಯಿಂದ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಸುತ್ತಮುತ್ತಲ ಗೂಡಂಗಡಿಗಳ ಮೇಲೆ ದಾಳಿ ಮಾಡಿ ಈವರೆಗೆ 150 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ  ಎಂದು ಜಿಲ್ಲಾ ರಕ್ಷಣಾಧಿಕಾರಿ ಎನ್. ಶಶಿಕುಮಾರ್ ತಿಳಿಸಿದರು.
 100 ಮೀಟರ್ ಒಳಗೆ ಇರುವ ಅಂಗಡಿಗಳ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಆಗಾಗ ಈ ರೀತಿ ದಾಳಿ ಮುಂದುವರೆಸುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments