ನಗರ ಸಾರಿಗೆ ಪ್ರಾರಂಭಕ್ಕೆ ಮನವಿ
ಚಿಕ್ಕಮಗಳೂರು: ನಗರದಲ್ಲಿ ಸರ್ಕಾರಿ ಬಸ್‌ಗಳ ನಗರ ಸಾರಿಗೆ ಸೇವೆಯನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ದಯಾನಂದ್ ತಿರುಗುಣ ಅವರ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. 15 ದಿನಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಸಂತೋಷ್ ಕೋಟ್ಯಾನ್, ಸ್ವರೂಪ್, ನವೀನ್, ಶರತ್, ಸುನೀಲ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕನಕದಾಸ ಜಯಂತಿ
ನರಸಿಂಹರಾಜಪುರ: ಕನಕದಾಸರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರಲಿಲ್ಲ ಎಂದು ತರೀಕೆರೆಯ ಸಾಹಿತಿ ಹಾಗೂ ಶಿಕ್ಷಕ ದೇವಾನಂದ್ ತಿಳಿಸಿದರು. ಅವರು ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ತಾಪಂಅಧ್ಯಕ್ಷ ಜೆ.ಜಿ. ನಾಗರಾಜ್ ಸಮಾರಂಭ ಉದ್ಘಾಟಿಸಿದರು. ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ರುಕ್ಮುಣಿಸುರೇಶ್, ಸುಜಾತ, ರಾಜೇಂದ್ರ, ಕೆ.ಪಿ. ಸಂಪತ್ ಕುಮಾರ್, ಆರಕ್ಷಕ ವೃತ್ತ ನಿರೀಕ್ಷಿಕ ಕೃಷ್ಣಮೂರ್ತಿ, ತಹಸೀಲ್ದಾರ್ ಹಾಗೂ ಕನಕದಾಸರ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.