ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯುತ್ ಸಂಪರ್ಕಕ್ಕೆ ಮನವಿ

Parashurama
Updated On : 8 Feb 2013, 10:02 am

ಮೂಡಿಗೆರೆ: ತಾಲೂಕಿನ ಕಿರುಗುಂದ ಗ್ರಾ.ಪಂ. ವ್ಯಾಪ್ತಿಗೆಯಲ್ಲಿರುವ ಹೆಗ್ಗರವಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆಗೆ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ನೀಡದೆ ನಿರ್ಲಕ್ಷ್ಯ ಖಂಡಿಸಿ ಹೆಗ್ಗರವಳ್ಳಿ ಗ್ರಾಮಸ್ಥರು ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.
ಹೆಗ್ಗರವಳ್ಳಿ ಗ್ರಾಮದಲ್ಲಿ ಸುಮಾರು 100ಕ್ಕೂ ಅಧಿಕ ಮನೆಗಳಿದ್ದು, ಇದರಲ್ಲಿ 39 ಮನೆಗಳು ಗಿರಿಜನರು ವಾಸವಾಗಿದ್ದಾರೆ. ಈ ಗ್ರಾಮಕ್ಕೆ ವಿದ್ಯುತ್ ಸಂಪರ್ಕಕ್ಕಾಗಿ ಈಗಾಗಲೇ ಮೆಸ್ಕಾಂ ಇಲಾಖೆಗೆ 1 ಲಕ್ಷ ಗಳನ್ನು ಪಾವತಿ ಮಾಡಲಾಗಿದೆ.
  ಆದರೆ, ಇಂದಿಗೂ ಮೆಸ್ಕಂ ಇಲಾಖೆ ವಿದ್ಯುತ್ ನೀಡದೆ ನಿರ್ಲಕ್ಷಿಸಿದೆ. ಇದರಿಂದಾಗಿ ಹೆಗ್ಗರವಳ್ಳಿ ಗ್ರಾಮದ ಗಿರಿಜನರು ಹಾಗೂ ಇತರರಿಗೂ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಈ ಸಮಸ್ಯೆಯನ್ನು ಒಂದು ವಾರದೊಳಗೆ ಬಗೆಹರಿಸದಿದ್ದರೆ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ತಾಲೂಕಿನಾಧ್ಯಂತ ಗಿರಿಜನ ಸಂಘಟನೆಗಳು ಫೆ.15ರಂದು ಮೆಸ್ಕಾಂ ಇಲಾಖೆ ಎದುರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಗಿರಿಜನ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಮುತ್ತಪ್ಪ, ಗಿರಿಜನ ಮುಖಂಡರಾದ ವಿಜೇಂದ್ರ, ಜನ್ನಪ್ಪ, ವಿಶ್ವನಾಥ್, ಕರಿಯ, ಸಂಜೀವ, ಗೋಪಾಲ, ಸುಂದರ, ಅಣ್ಣು, ಸಂತೋಷ್, ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments