ಅಮರ್ಪಕ ವಿದ್ಯುತ್: ಪ್ರತಿಭಟನೆ
ತರೀಕೆರೆ: ಕುಡಿಯವ ನೀರು ಮತ್ತು ಸಮರ್ಪಕ ವಿದ್ಯುತ್ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಶುಕ್ರವಾರ ಜಿಪಂ ಎಂಜಿನಿಯರಿಂಗ್ ಕಚೇರಿ ಮುಂಭಾಗದಲ್ಲಿ ಮಾಜಿ ಶಾಸಕ ಬಿ.ಆರ್.ನೀಲಕಂಠಪ್ಪ ಅವರ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ತಾಲೂಕು ರೈತ ಸಂಘದ ಕಾರ್ಯದರ್ಶಿ ಎನ್. ಲಕ್ಷ್ಮಣ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ, ಯೋಗೀಶ್, ಮುಗುಳಿ ಪ್ರಕಾಶ್, ಮಹೇಶ್ವರಪ್ಪ, ಐಸಮ್ಮ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ ಮಾತನಾಡಿ, ಶೇ.90 ಭಾಗಕ್ಕೆ ಕುಡಿಯಲು ನೀರಿಲ್ಲ, ಇರುವ ನೀರು ಕೂಡ ಸದ್ಬಳಕೆಯಾಗುತ್ತಿಲ್ಲ, ಕೆಟ್ಟುಹೋಗಿರುವ ಬೋರ್ವೆಲ್ಗಳನ್ನು ದುರಸ್ತಿ ಮಾಡಿಸುತ್ತಿಲ್ಲ, ದನಕರುಗಳಿಗೂ ನೀರಿಲ್ಲ, ತಾಲೂಕಿನಾದ್ಯಂತ ವಿದ್ಯುತ್ ತೀವ್ರ ಆಭಾವ ಇದೆ, ಅಧಿಕಾರಿಗಳು ಮೋಜಿನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಇದೇ ವೇಳೆ ಆರೋಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.