ಗಾಮ ಪಂಚಾಯಿತಿ ಅಧ್ಯಕ್ಷ, ಕಾರ್ಯದರ್ಶಿಗೆ ಸಜೆ
ಕಡೂರು: ಗ್ರಾಪಂ ಅಧ್ಯಕ್ಷೆ ಹಾಗೂ ಕಾರ್ಯದರ್ಶಿ ಸೇರಿ ಸುಮಾರು 13 ಲಕ್ಷ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆಂಬ ಪ್ರಕರಣ ಸಾಭೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಗೆ ಎರಡು ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 2 ಸಾವಿರ ದಂಡ ವಿಧಿಸಿರುವ ಪ್ರಕರಣ ವರದಿಯಾಗಿದೆ.
ಕಡೂರು ತಾಲೂಕು ಚಿಕ್ಕಂಗಳ ಗ್ರಾಪಂನಲ್ಲಿ 2003-2004 ಸಾಲಿನಲ್ಲಿ ಗ್ರಾಪಂ ಅಧ್ಯಕ್ಷರಾಗಿದ್ದ ಸುನಂದಾ ಮತ್ತು ಕಾರ್ಯದರ್ಶಿ ಮಲ್ಲೇಶಪ್ಪ ಎಂಬವರು ಗ್ರಾಪಂನ 13,30619 ಗಳನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಆರೋಪಿಸಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ಅಂದು ವೃತ್ತ ನೀರೀಕ್ಷಕರಾಗಿದ್ದ ಧರ್ಮರಾಜ್ ತನಿಖೆ ನಡೆಸಿ ವರದಿಯನ್ನು ಕಡೂರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ಕುರಿತು ಕಡೂರು ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಶೋಭಾರಾಣಿ ಬಿ. ಹಿರೇಮಠ್ರವರು ಆರೋಪ ಸಾಭೀತಾಗಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗೆ ಎರಡು ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 2 ಸಾವಿರ ರು. ದಂಢ ವಿಧಿಸಿ ರ್ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ಅಭಿಯೋಜಕ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.