ಮಕ್ಕಳ ಶಿಬಿರ
ನರಸಿಂಹರಾಜಪುರ: ಆರೋಗ್ಯ ಗ್ರಾಮೀಣ ಯೋಜನೆಯಡಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಗ್ರಾಮೀಣ ಭಾಗದ ಮಹಿಳೆಯರು ಇದರ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಲಲಿತ ತಿಳಿಸಿದರು. ಹಳೇ ಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ನಡೆದ ಮಕ್ಕಳ, ತಾಯಂದಿರ ಶಿಬಿರದಲ್ಲಿ ಮಾತನಾಡಿದರು. ಸಿಡಿಎಸ್ ಅಧ್ಯಕ್ಷೆ ಸುಮಿತ್ರ ತಾಯಂದಿರ ಶಿಬಿರ ಉದ್ಘಾಟಿಸಿದರು. ಉಪಾಧ್ಯಕ್ಷೆ ಜುಬೇದ, ಮಾಜಿ ಅಧ್ಯಕ್ಷೆ ಸುರೈಯಾ ಬಾನು ಉಪಸ್ಥಿತರಿದ್ದರು.
ಮ.ಅ.ಪ್ರ.ಮಂಡಳಿಗೆ 152 ಕೋಟಿ: ಸ್ವಾಗತ
ತರೀಕೆರೆ: ಮನೆನಾಡು ಪ್ರದೇಶ ಅಭಿವೃದ್ದಿ ಮಂಡಳಿಗೆ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ 152 ಕೋಟಿಗಳನ್ನು ರಾಜ್ಯ ಆಯವ್ಯಯದಲ್ಲಿ ತೆಗೆದಿರಿಸುವುದನ್ನು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎನ್.ಮಂಜುನಾಥ್ ಸ್ವಾಗತಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.