ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ

Parashurama
Updated On : 9 Feb 2013, 10:45 am

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿದ ಕಾರಣ ಶುಕ್ರವಾರ ಹೊರ ರೋಗಿ ವಿಭಾಗ ಸ್ಥಗಿತಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ಸಾರ್ವಜನಿಕರು ಚಿಕಿತ್ಸೆಗೆ ಪರದಾಡಬೇಕಾಯಿತು.
 ನಗರದ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯು ಸೇರಿದಂತೆ ಕಡೂರು, ತರೀಕೆರೆ, ನರಸಿಂಹರಾಜಪುರ, ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲ್ಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತೀರ ತುರ್ತು ಚಿಕಿತ್ಸೆಗೆ ಮಾತ್ರ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಮುಂದಾದರು.
ಹೊರ ರೋಗಿ ವಿಭಾಗ ಜಿಲ್ಲೆಯಲ್ಲಿರುವ 88 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ತಾ. ಆಸ್ಪತ್ರೆಗಳಲ್ಲು ಸ್ಥಗಿತಗೊಂಡಿತ್ತು. ಸರ್ಕಾರಿ ಆಸ್ಪತ್ರೆಗಳನ್ನು ವೈದ್ಯಕೀಯ ಕಾಲೇಜ್ ಆಡಳಿತ ವ್ಯಾಪ್ತಿಗೆ ನೀಡಬಾರದೆಂಬ  ವೈದ್ಯರು,ವೈದ್ಯಕೀಯ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments