ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Parashurama
Updated On : 10 Feb 2013, 10:29 am

ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜ್ಯೋತಿನಗರ, ಚಿಕ್ಕಮಗಳೂರು (ದೂರವಾಣಿ ಸಂಖ್ಯೆ 08262- 220324) ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪಂಪ್‌ಸೆಟ್ ವಿತರಣೆ
ನರಸಿಂಹರಾಜಪುರ: ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್ ಸೆಟ್ ಹಾಗೂ ಅದಕ್ಕೆ ಪೂರಕವಾದ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ತಾಪಂ ಆವರಣದಲ್ಲಿ ಶನಿವಾರ ನಡೆಯಿತು.  ಜಿಲ್ಲಾ ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದಿಂದ 27 ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ತಲಾ 1 ಲಕ್ಷ ರುಪಾಯಿ ಪಂಪ್ ಸೆಟ್ ಸಾಮಗ್ರಿಗಳು ಹಾಗೂ ಜಿಲ್ಲಾ ಅಂಬೇಡ್ಕರ್ ಡೆವಲಪ್ ಮೆಂಟ್ ಕಾರ್ಪೋಷನ್‌ನಿಂದ ಪ.ಜಾತಿ ಮತ್ತು ಪ.ವರ್ಗದ 15 ಫಲಾನುಭವಿಗಳಿಗೆ ತಲಾ 60 ಸಾವಿರ ರುಪಾಯಿ ಪಂಪ್ ಸೆಟ್ ಸಾಮಗ್ರಿಗಳನ್ನು ವಿತರಿಸಲಾಯಿತು. ಮೆಣಸೂರು ಗ್ರಾಪಂ ಅಧ್ಯಕ್ಷ ಶ್ರೀನಾಥ್ ಪರಿಕರಣಗಳನ್ನು ವಿತರಿಸಿ ಮಾತನಾಡಿ, ಸಚಿವ ಡಿ.ಎನ್. ಜೀವರಾಜ್ ಬಡವರ ಬಗ್ಗೆ ಖಾಳಜಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ತಾಲೂಕಿನ ಫಲಾನುಭವಿಗಳಿಗೆ ಬೋರ್ ವೆಲ್ ಹಾಗೂ ಪಂಪ್ ಸೆಟ್ ಮತ್ತು ಪೂರಕ ಸಾಮಾಗ್ರಿಗಳನ್ನು ಮಂಜೂರು ಮಾಡಿಸಿದ್ದಾರೆ. ಪ್ರತಿ ಫಲಾನುಭವಿಗಳಿಗೆ ತಲಾ 1 ಲಕ್ಷ ಸಹಾಯಧನ ಸಿಗುತ್ತದೆ. ಇದಕ್ಕೂ ಹೆಚ್ಚು ಖರ್ಚಾದರೆ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಯೋಜನೆಯನ್ನು ಸದ್ಬಳಿಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ಅವರು ಕರೆ ನೀಡಿದರು.  ಈ ಸಂದರ್ಭದಲ್ಲಿ  ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್.ಎಲ್. ಕೃಷ್ಣೇಗೌಡ, ಅಭಿವೃದ್ಧಿ ಅಧಿಕಾರಿ ಎಂ. ಗೋವಿಂದರಾಜು, ಜಿಲ್ಲಾ ವ್ಯವಸ್ಥಾಪಕ ಶೇಖರಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments