ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಮಾಜದೊಂದಿಗೆ ಬೆರೆಯಲು ಎನ್ನೆಸ್ಸೆಸ್ ಸಹಕಾರಿ

Parashurama
Updated On : 10 Feb 2013, 10:35 am

ನರಸಿಂಹರಾಜಪುರ: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಅಂಶಗಳಿದ್ದು ಎನ್.ಎಸ್.ಎಸ್.ನಿಂದ ಶಿಬಿರಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳಲಿದೆ ಎಂದು ತಾಲೂಕು ಪಂಚಾಯ್ತಿ ಸದಸ್ಯ ಎಸ್.ಎಸ್. ಶಾಂತಕುಮಾರ್ ತಿಳಿಸಿದರು.
ಅವರು ಶುಕ್ರವಾರ ಶೆಟ್ಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಳೆದ 7 ದಿನಗಳಿಂದ ನಡೆಯುತ್ತಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಮುಖ್ಯ ಅತಿಥಿಯಾಗಿದ್ದ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಆರ್. ಸದಾಶಿವ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದೊಂದಿಗೆ ಬೆರೆಯಲು ಎನ್.ಎಸ್.ಎಸ್.ಸಹಾಯವಾಗಲಿದೆ ಎಂದರು.
ಎನ್‌ಎಸ್‌ಎಸ್‌ನಿಂದ ಗ್ರಾಮಾಭಿವೃದ್ಧಿ: ತಾಲೂಕು ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಎನ್.ಎಂ. ಕಾಂತರಾಜ್ ಮಾತನಾಡಿ, ಮಹಾತ್ಮಾ ಗಾಂಧೀಜಿಯವರ ಕನಸಿನ ಗ್ರಾಮಾಭಿವೃದ್ಧಿಯು ಎನ್.ಎಸ್.ಎಸ್ ಮೂಲಕ ಸಾಕಾರಗೊಳ್ಳಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ. ಪೂರ್ಣೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶೆಟ್ಟಿಕೊಪ್ಪದ ಸೇಂಟ್ ಜೋಸೆಫ್ ಚರ್ಚಿನ ಧರ್ಮ ಗುರು ರೆ.ಫಾ. ಜೋಸ್, ಕಡಹಿಬೈಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಶೇಖರ್, ಗ್ರಾಮ ಪಂಚಾಯ್ತಿ ಸದಸ್ಯರಾದ ಎ.ಎಲ್. ಮಹೇಶ್, ಎಂ.ಟಿ. ಶ್ರೀನಿವಾಸ್, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ. ಜಯರಾಮ್, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಎ.ವಿ. ಮಂಜನಾಥ್, ಎನ್.ಎಸ್.ಎಸ್. ಶಿಬಿರಾಧಿಕಾರಿಗಳಾದ ಡಾ.ಕೆ. ಉಮೇಶ್, ಪ್ರೊ. ಮುಜೀಬ್ ಖಾನ್, ಶಾಲೆಯ ಮುಖ್ಯೋಪಾಧ್ಯಾಯನಿ ಪುಟ್ಟಮ್ಮ, ಶಿಕ್ಷಕ ಜಗದೀಶ್, ದಾನಿಗಳಾದ ಲಕ್ಷ್ಣಣಗೌಡರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದಾನಿಗಳಾದ ಲಕ್ಷ್ಣಣಗೌಡರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments