ಗುರುಕುಲ ಮಾದರಿ ಶಿಕ್ಷಣ ನೀಡುವುದು ಅಗತ್ಯ
ಚಿಕ್ಕಮಗಳೂರು: ಗುರುಕುಲ ವಿದ್ಯಾಸಂಸ್ಥೆ ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುವುದು ಉತ್ತಮವಾಗಿದ್ದು, ವಿದ್ಯಾರ್ಥಿಗಳಿಗೆ ಅವಶ್ಯವಿರುವ ಶಿಕ್ಷಣ ನೀಡುತ್ತಿರುವುದು ಶ್ಲಾಘನಾರ್ಹ ಎಂದು ಪಲ್ಲವಿ ರವಿ ಹೇಳಿದ್ದಾರೆ.
ನಗರದ ಕುವೆಂಪು ಕಲಾ ಮಂದಿರದಲ್ಲಿ ಇತ್ತೀಚೆಗೆ ನಡೆದ ಗೌರಿಕಾಲುವೆ ಬಡಾವಣೆಯ ಗುರುಕುಲ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ ಓದಿದಂತ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೂ ಹೆಸರು ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಕರೇಗೌಡ ವಹಿಸಿದ್ದರು, ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಆಶಿಕ್ ಎನ್. ಸ್ವರೂಪ್ ಮತ್ತು ನಂದನ್ ಹೊಳ್ಳ ಅವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರೇಮಲತಾ ನಾಗರಾಜ್ ವರದಿ ಮಂಡಿಸಿದರು. ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಬಿ.ವಿ. ಸಾಕ್ಷಿ ಮತ್ತು ಕೆ.ಎಸ್. ನಂದನ್ ಹೊಳ್ಳ ಕಾರ್ಯಕ್ರಮ ನಿರೂಪಿಸಿ, ಸುಮಯ್ಯ ಸ್ವಾಗತಿಸಿ, ಪ್ರಿಯಾಂಕ ಕೆ. ಶೆಟ್ಟಿ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.