ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗೋರಖ್ ಸಿಂಗ್ ವರದಿ ಅನುಷ್ಠಾನಕ್ಕೆ ಆಗ್ರಹ

Parashurama
Updated On : 11 Feb 2013, 11:04 am

ನರಸಿಂಹರಾಜಪುರ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಡಾ. ಗೋರಖ್ ಸಿಂಗ್ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಎರಡು ದಿನಗಳ ಕಾಲ ನಡೆಸಿದ ಪಾದಯಾತ್ರೆ ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ವರ್ಣಿಸಿದೆ.
ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಪತ್ರಿಕಾ ಹೇಳಿಕೆ ನೀಡಿ, ಬಿಜೆಪಿ ಪಕ್ಷಕ್ಕೆ   ಹಳದಿ ಎಲೆ ರೋಗದ ಅಡಿಕೆ ಬೆಳೆಗಾರರ ಬಗ್ಗೆ ನೈಜ ಕಳಕಳಿ ಇಲ್ಲ. ಕೇವಲ ಚುನಾವಣೆಗಾಗಿ ಗಿಮಿಕ್ ಮಾಡುತ್ತಿದೆ. ಹಳದಿ ರೋಗಪೀಡಿತ ಅಡಿಕೆ ಬೆಳೆಗಾರರ ಬಗ್ಗೆ ನೈಜ ಕಳಕಳಿ ಇದ್ದರೆ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಂಡಿಸಿದ ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬಹುದಿತ್ತು. ಕೇಂದ್ರದ ಮೇಲೆ ಅನಗತ್ಯ ಟೀಕೆ ಮಾಡುವ ಬಿಜೆಪಿ, ಕೇಂದ್ರ ಸರ್ಕಾರವು ಈಗಾಗಲೇ ಅಡಿಕೆ ಬೆಳೆಗಾರರ ನೆರವಿಗೆ ಬಂದಿರುವುದರ ಬಗ್ಗೆ ಗಮನಹರಿಸಬೇಕು ಎಂದು ಡಾ.ಕೆ.ಪಿ. ಅಂಶುಮಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments