ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪಡಿತರ ಬಿಡುಗಡೆ

Parashurama
Updated On : 11 Feb 2013, 11:23 am

ಚಿಕ್ಕಮಗಳೂರು: ಫೆಬ್ರವರಿ ಮಾಹೆಗೆ ಎ.ಎ.ವೈ. ಪಡಿತರ ಚೀಟಿದಾರರಿಗೆ 29 ಕೆ.ಜಿ. ಅಕ್ಕಿ, 6 ಕೆ.ಜಿ. ಗೋಧಿ, ಬಿಪಿಎಲ್ ಪಡಿತರ ಚೀಟಿದಾರರಿಗೆ 4 ರಿಂದ 20 ಕೆ.ಜಿ. ಅಕ್ಕಿ, 1 ರಿಂದ 3 ಕೆ.ಜಿ. ಗೋಧಿ ಮತ್ತು ಎಪಿಎಲ್ ಪಡಿತರ ಚೀಟಿದಾರರಿಗೆ 9 ಕೆ.ಜಿ. ಅಕ್ಕಿ, 3 ಕೆ.ಜಿ. ಗೋಧಿ ಬಿಡುಗಡೆ ಮಾಡಿದೆ. ಜಿಲ್ಲೆಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅವರಿಗಿಂತ ಕೆಳ ದರ್ಜೆಯ ಹಾಗೂ ಗೃಹರಕ್ಷಕ ಇಲಾಖೆ ಕಾರ್ಯನಿರ್ವಾಹಕ ಸಿಬ್ಬಂದಿಗಳಿಗೆ ಎಪಿಎಲ್ ದರದಲ್ಲಿ 15 ಕೆ.ಜಿ. ಅಕ್ಕಿ ಹಾಗೂ 3 ಕೆ.ಜಿ. ಗೋಧಿ ಬಿಡುಗಡೆ ಮಾಡಲಾಗಿದೆ. ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯಿಂದ ತಿಂಗಳ ಒಳಗೆ ಪಡೆಯಬಹುದು ಎಂದು ಆಹಾರ ಇಲಾಖೆಯ ಪ್ರಕಟಣೆ ತಿಳಿಸಿದೆ.
ಪೂರ್ವಭಾವಿ ಪರೀಕ್ಷಾ ತರಬೇತಿ
ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಐಎಎಸ್ ಹಾಗೂ ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ತರಬೇತಿ ನೀಡಲಾಗುವುದು. ಆಸಕ್ತರು ಫೆ. 11 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ  ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಬಿ.ಎಸ್. ವಿಶ್ವನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ ವಾರ್ಷಿಕೋತ್ಸವ
ಶೃಂಗೇರಿ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಭಾರತೀ ತೀರ್ಥ ರಂಗಮಂದಿರದಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.  ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್, ವಿದ್ಯಾರ್ಥಿಗಳು ಪಠ್ಯಚಟುವಟಿಕೆಗಳ ಜೊತೆ ಪಠ್ಯೇತರ ವಿಷಯಗಳತ್ತಲೂ ಆಸಕ್ತಿ ವಹಿಸಬೇಕು. ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮಲ್ಲಿ ಅಡಗಿರುವ ಪ್ರತಿಭೆ ಹೊರಹಾಕಬೇಕು. ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ರವೀಂದ್ರ, ಸತ್ಯನಾರಾಯಣ, ಮಂಜುನಾಥ್ ಇದ್ದರು. ಇದೇ ಸಂದರ್ಭದಲ್ಲಿ ಶಿಕ್ಷಕಿ ಶಿವಮ್ಮರವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments