ಮುಂದುವರೆದ ವೈದ್ಯರ ಪ್ರತಿಭಟನೆ
ಶೃಂಗೇರಿ: ವಿವಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ವೈದ್ಯರು ಹಾಗೂ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಮುಂದುವರೆದಿದೆ. ಕಳೆದೆರೆಡು ದಿನಗಳಿಂದ ಮುಷ್ಕರ ನಡೆಯುತ್ತಿದ್ದರಿಂದ ರೋಗಿಗಳಿಗೆ ಯಾವದೇ ಚಿಕಿತ್ಸಾ ಸೌಲಭ್ಯ ಸಿಗದೇ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಕೊಪ್ಪದಲ್ಲೂ....
ಕೊಪ್ಪ: ವೈದ್ಯರ ಮುಷ್ಕರ ಮೂರನೇ ದಿನಕ್ಕೆ ಮುಂದುವರಿದ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಕೆಲಸಕ್ಕೆ ಹಾಜರಾಗದೇ ಇರುವುದರಿಂದ ರೋಗಿಗಳು ಖಾಸಗಿ ಆಸ್ಪತ್ರೆಯತ್ತ ತೆರಳುತ್ತಿರುವ ದೃಶ್ಯ ಸಮಾನ್ಯವಾಗಿತ್ತು. ತುರ್ತು ಚಿಕಿತ್ಸೆಗೆ ಬರುವರನ್ನು ಮಾನವೀಯ ದೃಷ್ಟಿಯಿಂದ ಪ್ರಥಮ ಚಿಕಿತ್ಸೆ ಮಾಡಿ ಕಳುಹಿಸಲಾಗುತ್ತಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.