ಕನ್ನಡ ಜಾಗೃತಿ ವೇದಿಕೆ ಸಭೆ
ನರಸಿಂಹರಾಜಪುರ: ರಾಜ್ಯ ಸಹ ಬಾಳ್ವೆ, ವಿಭಿನ್ನ ಸಂಸ್ಕೃತಿಗೆ ಹೆಸರು ವಾಸಿಯಾಗಿದೆ ಎಂದು ರಾಜ್ಯ ಭಾಷಾ ಅಲ್ಪ ಸಂಖ್ಯಾತರ ಕನ್ನಡ ಜಾಗೃತ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಜೆ. ಆಂಟೋನಿ ತಿಳಿಸಿದರು. ರಾವೂರು ಸಮೀಪ ಭದ್ರಾ ಹಿನ್ನೀರಿನ ದಡದಲ್ಲಿ ಆಯೋಜಿಸಿದ್ದ ಕನ್ನಡ ಜಾಗೃತಿ ವೇದಿಕೆಯ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆಯ ಸೇವೆ ಮಾಡುವುದರಿಂದ ರಾಜ್ಯದ ಜಲ, ನೆಲ, ಗಾಳಿ, ಅನ್ನದ ಋಣ ತೀರಿಸಬಹುದು ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಭಾಷಾ ಅಲ್ಪ ಸಂಖ್ಯಾತರ ಕನ್ನಡ ಜಾಗೃತ ವೇದಿಕೆಯ ತಾಲೂಕು ಅಧ್ಯಕ್ಷ ಡೆನ್ನಿ ಮಾತನಾಡಿ, ಶೀಘ್ರದಲ್ಲೇ ತಾಲೂಕಿನಲ್ಲಿ ವೇದಿಕೆಯಿಂದ ಕನ್ನಡ ಭಾಷೆ ಬಿಂಬಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು. ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಎಸ್. ಆಶೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸಮೀರಾ ನಹೀಂ, ಮಥಾಯ್, ಸುಲೋಚನಾ, ಸುಮತಿ ಆಚಾರ್ ಇದ್ದರು. ವಿವಿಧ ಕ್ರೀಡಾ ಕೂಟ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.