ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ಪ್ರತಿಭಟನೆ

Parashurama
Updated On : 12 Feb 2013, 10:40 am

ಚಿಕ್ಕಮಗಳೂರು: ಕೈಗಾರಿಗಳ ಅಭಿವೃದ್ಧಿ ಸಂದರ್ಭ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಾರದೆಂದು ಆಗ್ರಹಿಸಿ  ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಯಿತು.
ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಐ.ಎನ್. ಬಸವೇಗೌಡ ಹಾಗೂ ಕಾರ್ಯದರ್ಶಿ ಕೆ.  ಪರಮೇಶ್ವರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದೇಶದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದರಿಂದ  ಮುಂದಿನ ದಿನಗಳಲ್ಲಿ ಆಹಾರೋತ್ಪಾದನೆ ಕುಂಠಿತವಾಗಿ ಸಾಮಾನ್ಯ ಜನರ ಜೀವನ ಕಷ್ಟಕ್ಕೀಡಾಗಲಿದೆ. ಆದುದರಿಂದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ದೇಶೀಯ ಅಥವಾ ವಿದೇಶೀಯ ಯಾವುದೇ ಕಂಪನಿಗಳಿಗೆ ನೀಡಬಾರದು ಎಂದು ಅವರು ಆಗ್ರಹಿಸಿದರು.
ಲಾಭದಾಯಕ ಬೆಲೆ ಸಿಗುತ್ತಿಲ್ಲ: ಕಳೆದ ವರ್ಷಗಳಿಂದ ಗ್ಯಾಟ್ ಒಪ್ಪಂದದ ನೆಪದಲ್ಲಿ ಕೃಷಿಗೆ  ಆದ್ಯತೆ ನೀಡದ ಕಾರಣ ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುತ್ತಿಲ್ಲ. ಅವಶ್ಯಕ ವಸ್ತುಗಳ ಅಡಿಯಲ್ಲಿ ನಿಯಂತ್ರಣ ಮಾಡುವುದು ಸರಿಯಲ್ಲ. ರೈತರ ಉತ್ಪಾದನೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಬೆಲೆ ನಿಗದಿ ಮಾಡಿರುವುದು ರೈತರ ಆತ್ಮಹತ್ಯೆಗೆ  ಕಾರಣವಾಗಿದೆ. ಅದುದರಿಂದ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚು ಲಾಭದಾಯಕ ಬೆಲೆ ನಿಗದಿ ಮಾಡಿ ಸರ್ಕಾರವೇ ಖರೀದಿಸುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕೃಷಿ ಭೂಮಿ ಅಭಿವೃದ್ಧಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೇ.12ರಿಂದ 15ರವರೆಗೆ ಬಡ್ಡಿ ಹಾಕಲಾಗುತ್ತಿದೆ. ಅದನ್ನು ಶೇ.ರು.ರ ಬಡ್ಡಿ ದರದಲ್ಲಿ ಸಾಲ ಸುಲಭವಾಗಿ ಏಕಗವಾಕ್ಷಿ ರೂಪದಲ್ಲಿ ಸಿಗುವಂತೆ ಆಗಬೇಕು. ಕೃಷಿ ಉತ್ಪನ್ನಗಳಿಗೆ  ಕಟಾವು ಮಾಡಿದ ತಕ್ಷಣ ಅಗತ್ಯ ಗೋದಾಮುಗಳ ವ್ಯವಸ್ಥೆ ಇಲ್ಲದ ಕಾರಣ ಮಧ್ಯವರ್ತಿಗಳಿಗೆ ಕೇಳಿದ ಬೆಲೆಗೆ  ಮಾರಾಟ ಮಾಡಬೇಕಾಗುತ್ತದೆ. ಸರ್ಕಾರವೇ ರೈತರ ಉತ್ಪನ್ನಗಳಿಗೆ ವ್ಯವಸ್ಥಿತ ಗೋದಾಮುಗಳನ್ನು ನಿರ್ಮಾಣ ಮಾಡಿ ರೈತರಿಗೆ ಆಗುವ ನಷ್ಟಗಳನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಬೆಲೆ ಗಗನಕ್ಕೆ: ಕುಡಿಯುವ ನೀರಿನ ನಂತರ ಕೃಷಿಗೆ ಆದ್ಯತೆ ನೀಡಿ ಕೃಷಿ ಅಭಿವೃದ್ಧಿಗೆ ನೀರಾವರಿ ವ್ಯವಸ್ಥೆಯನ್ನು ಮಾಡಬೇಕು. ಕೈಗಾರಿಕೆಗಳಿಗೆ ಮೂರನೇ ಆದ್ಯತೆ ಕೊಡಬೇಕು. ಈಗಾಗಲೇ ರಸಗೊಬ್ಬರಗಳಿಗೆ ಅನುದಾನವನ್ನು ಕಡಿತಗೊಳಿಸಲಾಗಿದೆ. ವಿದೇಶದಿಂದ ಇದನ್ನು ಆಮದು ಮಾಡಿಕೊಳ್ಳಬೇಕಾಗಿರುವುದರಿಂದ ರಾಸಾಯನಿಕ ಗೊಬ್ಬರ ಬೆಲೆಗಳು ಗಗನಕ್ಕೇರಿವೆ. ಸ್ಥಳೀಯವಾಗಿ ಗೊಬ್ಬರ ಉತ್ಪಾದನೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘದ  ಜಿಲ್ಲಾಧ್ಯಕ್ಷ ನಿವೇದಿತ್, ಕಾರ್ಯದರ್ಶಿ ಶೋಭಾನ್‌ಬಾನು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments