'ಬಿಸಿಯೂಟ ಕಾರ್ಯಕರ್ತೆಯರ ಸಂಬಳ ಹೆಚ್ಚಿಸಿ'
ನರಸಿಂಹರಾಜಪುರ: ಬಿಸಿಯೂಟ ಕಾರ್ಯಕರ್ತೆಯರಿಗೆ ಸರ್ಕಾರ ನೀಡುತ್ತಿರುವ ಸಂಬಳ ಕಡಿಮೆ ಇದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಬಿಸಿಯೂ ಟ ಕಾಯ ರ್ಕರ್ತೆ ಯರಿಗೂ ಸಂಬಳ ಜಾಸ್ತಿ ಮಾಡಬೇಕು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ತಿಳಿಸಿದರು.
ಗುರುಭವನದಲ್ಲಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ತಾಲೂಕು ವ್ಯಾಪ್ತಿಯ ಕಾರ್ಯನಿರತ ಅಡಿಗೆ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಎಲ್ಲಾ ವೃತ್ತಿಗಿಂತ ಅಡಿಗೆ ವೃತ್ತಿ ಶ್ರೇಷ್ಠವಾದ ವೃತ್ತಿಯಾಗಿದ್ದು ಬಿಸಿಯೂಟ ಕಾರ್ಯಕರ್ತೆಯರು ತಮ್ಮ ವೃತ್ತಿಯನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.
ಮಹಾಲಸ ಗ್ಯಾಸ್ ಏಜೆನ್ಸಿಯ ಎಚ್.ಬಿ. ಮಂಜುನಾಥ್ ಗ್ಯಾಸ್ ಬಳಕೆಯ ಸುರಕ್ಷಿತೆ ಬಗ್ಗೆ ಮಾಹಿತಿ ನೀಡಿದರು. ತಾಪಂ ಉಪಾಧ್ಯಕ್ಷೆ ಸುಮಿತ್ರ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಆರೋಗ್ಯ ನಿರೀಕ್ಷಿಕ ಪಿ.ಪ್ರಭಾಕರ್, ಶಿಕ್ಷಣ ಇಲಾಖೆಯ ಕೃಷ್ಣನಾಯಕ್, ಎಚ್.ಎನ್. ಚೆಲುವಾದಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಬಿ.ಜಿ. ಮಾಳಮ್ಮನವರ್, ಮಲ್ಲಪ್ಪ, ತಾಲೂಕು ಬಿಸಿಯೂಟ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.