ಮಕ್ಕಳ ಭಾವನೆಗೆ ಒತ್ತು ನೀಡಿ
ತರೀಕೆರೆ: ಪೋಷಕರು ಮಕ್ಕಳ ಭಾವನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಪುರಸಭೆ ಅಧ್ಯಕ್ಷ ಎಂ. ನರೇಂದ್ರ ತಿಳಿಸಿದ್ದಾರೆ.
ಅವರು ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಪೋಷಕರಿಗಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಚೈತನ್ಯ ಶಕ್ತಿ: ಪುಸ್ತಕದ ಜೊತೆಗೆ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಸಿದ್ಧಗೊಳಿಸಬೇಕು. ಮಕ್ಕಳಿಗೆ ಇಂತಹ ಚೈತನ್ಯ ಶಕ್ತಿ ತುಂಬುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲೆ ಹೆಚ್ಚಾಗಿದೆ ಎಂದು ತಿಳಿಸಿದ ಅವರು ಪ್ರಹರ್ಷಿತ ವಿದ್ಯಾ ಸಂಸ್ಥೆ ಪ್ರತಿವರ್ಷ ಪೋಷಕರಿಗಾಗಿ ಕ್ರೀಡಾಕೂಟ ಏರ್ಪಡಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಸಂಸ್ಥೆ ಅಡಳಿತಾಧಿಕಾರಿ ಟಿ.ಆರ್. ರುದ್ರಯ್ಯ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.