ಮುತ್ತತ್ತಿಯಲ್ಲಿ ನೀರಿನಲ್ಲಿ ಮುಳುಗಿ ಯುವಕ ಸಾವು
ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ಯುವಕ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗಡಿರಂಗಾಪುರ ಗ್ರಾಮದ ರಾಚಪ್ಪನವರ ಏಕೈಕ ಮಗ ರಘು (20) ಎಂದು ಗುರುತಿಸಲಾಗಿದೆ.
ಈತ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಭಾನುವಾರ ಸಾಯಂಕಾಲ ಐವರು ಸ್ನೇಹಿತರೊಂದಿಗೆ ಮುತ್ತತ್ತಿಗೆ ಪ್ರವಾಸಕ್ಕೆಂದು ಬಂದಾಗ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಸೋಮವಾರ ನದಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿದೆ.
ಹಲಗೂರು ಸಬ್ಇನ್ಸ್ಪೆಕ್ಟರ್ ಎಸ್. ಗಂಗಾಧರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.