ಪಪಂ ಅಧ್ಯಕ್ಷೆ ರುಕ್ಮಣಿ ಸುರೇಶ್ ಅಧಿಕಾರ ಹಸ್ತಾಂತರ
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿ ಸದಸ್ಯರ 5 ವರ್ಷದ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ರುಕ್ಮಣಿ ಸುರೇಶ್ ಅವರು ತಹಸೀಲ್ದಾರ್ ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ರುಕ್ಮಣಿಸುರೇಶ್ ಮಾತನಾಡಿ, ತಾವು 2.50 ವರ್ಷ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ತಮಗೆ ಸಹಕಾರ ನೀಡಿದ ಸದಸ್ಯರಿಗೆ ಕೃತಜ್ಞತೆ ಅರ್ಪಿಸುತ್ತೇನೆ ಎಂದರು.
ಅಧಿಕಾರ ಸ್ವೀಕರಿಸಿದ ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಪಟ್ಟಣ ಪಂಚಾಯ್ತಿಯಲ್ಲಿ ಈ ಹಿಂದೆ ಕೈಗೂಂಡ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು. ಅರ್ಧಕ್ಕೆ ನಿಂತ ಕಾಮಗಾರಿಗಳನ್ನು ಮುಂದುವರಿಸಲಾಗುವುದು. ಸರ್ಕಾರದ ಆದೇಶ ಹಾಗೂ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತೇನೆ ಎಂದರು.
ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ರಾಜೇಂದ್ರ ಮಾತನಾಡಿದರು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಾಗೇಂದ್ರ ಉಪಸ್ಥಿತರಿದ್ದರು.