ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಲೆನಾಡು ನೌಕರರನ್ನು ಮರೆತ ಬಜೆಟ್

Lingaraj Badiger
Updated On : 13 Feb 2013, 10:36 am

ಮೂಡಿಗೆರೆ: ಮಲೆನಾಡು ಪ್ರದೇಶದಲ್ಲಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ವಿಶೇಷ ಭತ್ಯೆ ನೀಡಬೇಕೆಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುತ್ತಲೇ ಬಂದರೂ ಈ ಬಾರಿ ಬಜೆಟ್‌ನಲ್ಲಿ  ಮಲೆನಾಡು ನೌಕರರನ್ನು ಮರೆತಿದೆ ಎಂದು ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ಗಂಗಾಧರ್ ಬೇಸರ ವ್ಯಕ್ತಪಡಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಲೆನಾಡು ಪ್ರದೇಶವಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ  ಭಾಗಗಳಲ್ಲಿ ಕೆಲಸ ಮಾಡುವ ನೌಕರರಿಗೆ ಗಿರಿಭತ್ಯೆ ನೀಡಲು ಈ ಹಿಂದಿನ ಬಜೆಟ್‌ನಲ್ಲಿ ಶಿಫಾರಸ್ಸು  ಮಾಡಲಾಗಿತ್ತು. ಮುಂದಿನ ಬಜೆಟ್‌ನಲ್ಲಿ ಗಿರಿಭತ್ಯೆ ನೀಡುವುದಾಗಿ ಆಶ್ವಾಸನೆ ಕೊಟ್ಟಿದ್ದು ಈ ಬಾರಿ ಬಜೆಟ್‌ನಲ್ಲಿ  ಮೂರು ಜಿಲ್ಲೆಗಳ ನೌಕರರಿಗೆ ಬಹಳ ಅನ್ಯಾಯವಾಗಿದೆ ಹಾಗೂ ಬೆಂಗಳೂರು ನಗರದಲ್ಲಿ ಕೆಲಸ ಮಾಡುವ ನೌಕರರಿಗೆ ಮಾತ್ರ ಮೂಲ ವೇತನದಲ್ಲಿ ಶೇ.30ರಷ್ಟು ಮನೆ ಬಾಡಿಗೆ ಭತ್ಯೆಯನ್ನು ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ಸ್ವಾಗತರ್ಹ. ಆದರೆ ಜಿಲ್ಲಾಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ನೌಕರರನ್ನು ಮರೆತಿರುವುದು ದುರದೃಷ್ಟಕರ ಸಂಗತಿ ಎಂದರು.
ನೌಕರರ ಸಂಘದ ಕಾರ್ಯದರ್ಶಿ ಧರ್ಮಪ್ಪ, ಪೂರ್ಣೇಶ್, ಗೋಪಾಲಕೃಷ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement