16ರಂದು 'ತುಳು ವೈಭವೊ'
ಮೂಡಿಗೆರೆ: ಪಟ್ಟಣದ ಅಡ್ಯಂತಾಯ ರಂಗಮಂದಿರಲ್ಲಿ ಮೂಡಿಗೆರೆಯ ತುಳು ಕೂಟದ ಆಶ್ರಯದಲ್ಲಿ ತುಳು ವೈಭವೋ ನಾಲ್ಕನೇ ವರ್ಷದ ಕಾರ್ಯಕ್ರಮವನ್ನು 16ರಂದು ಹಮ್ಮಿಕೊಳ್ಳಲಾಗಿದೆ ಎಂದು ತುಳು ಕೂಟದ ಅಧ್ಯಕ್ಷ ಅತುಲ್ ರಾವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಳು ವೈಭವದ ಅಂಗವಾಗಿ 16 ಸಂಜೆ ಸ್ಥಳೀಯ ಕಲಾವಿದರಿಂದ ವಿವಿಧ ಮನರಂಜನೆ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ತುಳು ವೈಭವೋ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಹೊರನಾಡಿನ ಧರ್ಮದರ್ಶಿ ಡಾ.ಜಿ. ಭೀಮೇಶ್ವರ ಜೋಷಿ, ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಎಂ.ಪಿ. ಕುಮಾರಸ್ವಾಮಿ, ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ, ಧರ್ಮಗುರುಗಳಾದ ಲ್ಯಾನ್ಸಿ ಪಿಂಟೋ, ಜನಾಬ್ ಅಬ್ದುಲ್ ಸಲೀಂ ಫೈಝಿ, ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಹಾಗೂ ಕಾತ್ಯಾಯಿನಿ ಕುಂಜಿಬೆಟ್ಟುರವರಿಂದ ತುಳು ನಾಡು ನುಡಿಯ ಬಗ್ಗೆ ವಿಶೇಷ ಉಪನ್ಯಾಸವಿರುತ್ತದೆ ಎಂದರು.
ತುಳುನಾಡ ವೈಭವೋ ನೃತ್ಯರೂಪಕ ಏರ್ಪಡಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.