ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರಸ್ತೆಗೆ ಅಂಬೇಡ್ಕರ್ ಹೆಸರಿಡಲು ನಿರ್ಲಕ್ಷ್ಯ: ಅನಂತ್ ಆರೋಪ

Parashurama
Updated On : 14 Feb 2013, 11:12 am

ಮೂಡಿಗೆರೆ: ಸಂವಿಧಾನ ಶಿಲ್ಪಿ ಡಾ. ಬಾಬಾ ಅಂಬೇಡ್ಕರ್ ಹೆಸರನ್ನು ರಸ್ತೆಗೆ ಇಡಲು ಪಟ್ಟಣ ಪಂಚಾಯಿತ್ ಸದಸ್ಯರು ಮೀನಮೇಷ ಎಣಿಸುತ್ತಿದ್ದಾರೆ  ಎಂದು ಜಿಪಂಸದಸ್ಯ ಎಂ.ಎಸ್.ಅನಂತ್ ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಮೂಡಿಗೆರೆ ತಾಲೂಕಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರ ಮತ್ತು ಸಾಹಿತಿಗಳ ಹೆಸರನ್ನು ಇಟ್ಟಿರುವುದು ಸ್ವಾಗತಾರ್ಹ. ಆದರೆ ಮುಸಲ್ಮಾನರು, ಕ್ರಿಶ್ಚಯನ್ ಹಾಗೂ ದಲಿತ ನಾಯಕರನ್ನು ಗುರುತಿಸದೆ ಅವರ ಹೆಸರನ್ನು ಇಡದೆ ಇರುವುದು ಬೇಸರದ ವಿಷಯವಾಗಿದೆ ಎಂದರು.
ಪಟ್ಟಣ ಪಂಚಾಯಿತಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಹೆಸರಿಡಲು ನಿರ್ಲಕ್ಷ್ಯ ಧೋರಣೆ ತೋರಿಸಿದ್ದು, ಪಪಂ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ಗೋಷ್ಠಿಯಲ್ಲಿ ಲೋಕವಳ್ಳಿ ರಮೇಶ್, ಮಂಜುನಾಥ್, ಬಿ. ರಾಮು, ಕಿರುಗುಂದ ರಾಮಯ್ಯ, ಯು.ಬಿ. ಮಮಜಯ್ಯ, ಬೆಟ್ಟಗೆರೆ ಶಂಕರ್, ಹೊಸಕೆರೆ ರಮೇಶ್, ನಾಗೇಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments