ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಾಹಿತಿ ಎ.ಎನ್. ಸ್ವಾಮಿ ಇನ್ನಿಲ್ಲ

Parashurama
Updated On : 14 Feb 2013, 10:54 am

ಚಿಕ್ಕಮಗಳೂರು: ಹಿರಿಯ ಸಾಹಿತಿ ಎ.ಎನ್. ಸ್ವಾಮಿ (94) ಅವರು ಬುಧವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.  ಎರಡು ದಶಕಗಳಿಂದ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಅಂಗವಿಕಲರೂ ಆಗಿದ್ದ ಸ್ವಾಮಿ, ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಪ್ರಕಾಶ್ ಸೇರಿದಂತೆ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
ಕಾಲಿನಐಬು ಮತ್ತು ಕಿವುಡುತನದ ಜೊತೆಗೆ ಸ್ವಷ್ಟ ಉಚ್ಚರಣೆ ಮಾಡಲಾಗದ ಸ್ವಾಮಿ, ಸಂಶೋಧನಾ ಕಾದಂಬರಿಯನ್ನು ರಚಿಸಿದವರು. ಕಥೆ, ಚುಟುಕ, ಹಾಸ್ಯ, ಬರಹಗಳಿಂದ ಹೆಸರಾದವರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು. ಗೋಕಾಕ್ ವರದಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ನಗರಸಭಾ ಅಧ್ಯಕ್ಷ ಸಿ.ಆರ್. ಪ್ರೇಮ್‌ಕುಮಾರ್ ಸೇರಿದಂತೆ ಮಾಜಿ ಅಧ್ಯಕ್ಷ ಎಚ್.ಡಿ. ತಮ್ಮಯ್ಯ, ಶ್ರೀನಿವಾಸ, ನಿಂಗೇಗೌಡ ಮತ್ತಿತರರು ಅಂತಿಮ ನಮನ ಸಲ್ಲಿಸಿದರು. ಸ್ವಂತ ಊರಾದ ಹಳೇ ಆಲ್ದೂರಿನ ತೋಟದಲ್ಲಿ ಅಂತಿಮಸಂಸ್ಕಾರ ಶಂಕರದೇವರಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಬುಧವಾರ ಸಂಜೆ ನೆರವೇರಿತು.
ಸಚಿವ ಸಿ.ಟಿ. ರವಿ, ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷೆ ಗೌರಮ್ಮ ಬಸವೇಗೌಡ, ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ ಅವರು ಸಾಹಿತಿ ಸ್ವಾಮಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments