ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹಲ್ಲೆ: ಆರೋಪಿಗೆ 2 ವರ್ಷ ಜೈಲು

Parashurama
Updated On : 14 Feb 2013, 10:54 am

ಚಿಕ್ಕಮಗಳೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿದ ಆರೋಪಿಗೆ ನಗರದ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಮತ್ತಾವರ ಗ್ರಾಮದ ನಿವಾಸಿ ಎಂ.ಎನ್. ಲಿಂಗೇಗೌಡ ಎಂಬುವರು ತಮ್ಮ ತೋಟದಿಂದ ಸೌದೆಯನ್ನು ಹೊತ್ತುಕೊಂಡು ಮನೆಗೆ ಬರುತ್ತಿದ್ದಾಗ ಪಕ್ಕದ ತೋಟದವರಾದ ಶಾಂತೇಗೌಡ ಎಂಬುವರು ಹಳೆಯ ದ್ವೇಷದಿಂದ ಅವರನ್ನು ತಡೆದು ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ಪ್ರಧಾನ ಜೆಎಂಎಫ್‌ಸಿ ನ್ಯಾಯಾಧೀಶರಾದ ಎನ್. ಸುಬ್ರಹ್ಮಣ್ಯ ಅವರು  ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಶಾಂತೇಗೌಡರಿಗೆ ಎರಡು ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು  ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ನಾರಾಯಣ ಶೇರಿಗಾರ್ ವಾದ ಮಂಡಿಸಿದರು.
ಕಳ್ಳತನ: ಆರೋಪಿಗೆ ಜೈಲು
ಕಳ್ಳತನ ಮಾಡಿದ ಆರೋಪಿಗೆ ನಗರದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  ನರಗುಡ್ಡನಹಳ್ಳಿಯಲ್ಲಿ ಮುಜಾಮಿಲ್ ಅಲಿಯಾಸ್ ಬಾಬರ್ ಎಂಬಾತನು ಪ್ರಕಾಶ ಎಂಬುವರಿಗೆ ಸೇರಿದ ಇಚರ್ ವಾಹನದಲ್ಲಿದ್ದ, ಬ್ಯಾಟರಿ ಜಾಕ್ ಮತ್ತು ಲೇವರನ್ನು ಕಳ್ಳತನ ಮಾಡಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣ ವಿಚಾರಣೆ ನಡೆಸಿದ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಆರೋಪಿಗೆ ನಾಲ್ಕು ತಿಂಗಳು ಸಜೆ  ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಾಘವೇಂದ್ರ ರಾಯ್ಕರ್ ವಾದ ಮಂಡಿಸಿದರು.
ಬೈಕ್ ಡಿಕ್ಕಿ: ವ್ಯಕ್ತಿ ಸಾವು
ಮೂಡಿಗೆರೆ: ಹುರುಡಿಯಿಂದ ಮೂಡಿಗೆರೆ ಬೈಕಿನಲ್ಲಿ ಬರುತ್ತಿದ್ದಾಗ ಅಣಜೂರ್ ಬಳಿ ಮರಕ್ಕೆ ಬೈಕ್ ಡಿಕ್ಕಿ ಆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದು. ಆತನ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿಗೆ  ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣ ಗೋಣಿಬೀಡು ಠಾಣೆಯಿಂದ ವರದಿಯಾಗಿದೆ. ಮೃತ ಪಟ್ಟ ವ್ಯಕ್ತಿ ಹುರುಡಿಯ ಹೇಮಂತ್(18),  ನಾಗೆಂದ್ರ ಸಣ್ಣಪುಟ್ಟಗಾಯಗಳಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃತ್ತ ನಿರೀಕ್ಷಕ ರಮೇಶ್, ಗೋಣಿಬೀಡು ಠಾಣಾಧಿಕಾರಿ ರೇವಣ್ಣ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments