ರು. 10 ಲಕ್ಷ ವೆಚ್ಚದಲ್ಲಿ ರಸ್ತೆಗೆ ಕಾಂಕ್ರೀಟ್
ಚಿಕ್ಕಮಗಳೂರು: ನಗರದ ರಾಮನಹಳ್ಳಿಯ ವೈಭವ್ ಕ್ಯಾಂಟೀನ್ ರಸ್ತೆ ಸೇರಿದಂತೆ 10 ಲಕ್ಷ ರು. ವೆಚ್ಚದಲ್ಲಿ ವಿವಿಧ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಲಾಗುತ್ತಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಪ್ರೇಂಕುಮಾರ್ ಹೇಳಿದ್ದಾರೆ.
ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ, ಎಸ್‌ಇಪಿ ಯೋಜನೆಯಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ರಾಮನಹಳ್ಳಿಯ ಕ್ಯಾಂಟೀನ್ ರಸ್ತೆಯನ್ನು 10 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ಹಾಕಲಾಗುತ್ತಿದೆ. ನಗರದ ಎಲ್ಲಾ ಕಾಲೋನಿಗಳಿಗೂ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ. ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ ಎಂದರು.
ನಗರಸಭಾ ಮಾಜಿ ಸದಸ್ಯ ಕುಮಾರಸ್ವಾಮಿ ಮಾತನಾಡಿ, ಸ್ಥಳೀಯ ಜನರ ಸಹಕಾರದಿಂದ ವಾರ್ಡ್‌ನಲ್ಲಿ ರಸ್ತೆ, ಕುಡಿಯುವ ನೀರಿನ ಕಾಮಗಾರಿ, ಬಾಕ್ಸ್ ಚರಂಡಿ ನಿರ್ಮಾಣ, ಸಮುದಾಯ ಭವನ, ಉದ್ಯಾನವನ ಸೇರಿದಂತೆ 2.5 ಕೋಟಿಗೂ ಹೆಚ್ಚು ಅಭಿವೃದ್ದಿ ಕೆಲಸಗಳಾಗಿವೆ ಎಂದರು.