ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಂಗವಿಕಲರಿಗೆ ಕೀಳರಿಮೆ ಬೇಡ

Mainashree
Updated On : 16 Feb 2013, 11:30 am

ಮೂಡಿಗೆರೆ: ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳು, ಕೀಳರಿಮೆ ಬೆಳೆಸಿಕೊಳ್ಳದೇ ಸಮಾಜದಲ್ಲಿ ಸಾಧಕರಾಗಬೇಕು ಎಂದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಪದ್ಮಪ್ರಸಾದ್ ಹೇಳಿದರು.
 ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜಿಪಂ ಚಿಕ್ಕಮಗಳೂರು, ತಾಪಂ ಮೂಡಿಗೆರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಡಿಗೆರೆ, ಶಿಕ್ಷಣ ಇಲಾಖೆ ಮೂಡಿಗೆರೆ, ವಿಕಲಚೇತನರ ಒಕ್ಕೂಟದ ಸಂಯಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನದ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ವಿಶ್ವಮಟ್ಟದಲ್ಲಿ ಸಾಧನೆ: ಅಂಗವಿಕಲತೆ ಎಂಬುವುದು ಶಾಪವಲ್ಲ, ಅಂಗವೈಕಲ್ಯ ಹೊಂದಿದರೂ, ವಿಶ್ವ ಮಟ್ಟದಲ್ಲಿ ಸಾಧನೆ ಮಾಡಿದ ಹಲವಾರು ವ್ಯಕ್ತಿಗಳನ್ನು ಕಾಣಬಹುದು. ಮಾನಸಿಕವಾಗಿ ಪ್ರಬಲತೆ ಪಡೆದುಕೊಂಡರೆ ಸಾಧನೆಗೆ ಯಾವುದೇ ಅಡೆತಡೆಗಳಾಗದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್. ಕೊಮರಯ್ಯ ಮಾತನಾಡಿ, ಅಂಗವಿಕಲರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆ ತರಬೇಕಾದುದು ಪ್ರತಿಯೊಬ್ಬರ ಕರ್ತವ್ಯ. ಅಂಗವಿಕಲರಿಗಾಗಿ ಸರ್ಕಾರ ಹಲವು ಸಹಾಯಕ ಯೋಜನೆ  ಜಾರಿಗೊಳಿಸಿದ್ದು, ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕಿನ ಅಂಗವಿಕಲಿರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನಡೆದ ಪ್ಯಾರಾ ಒಲಂಪಿಕ್ ಕ್ರೀಡೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ನ್ಯಾಯಾಧೀಶರು ಬಹುಮಾನ ವಿತರಿಸಿದರು.
ಕಾರ್ಯಕ್ರಮದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ  ಬಹುಮಾನ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement