ಯೋಜನೆಗಳು ಸದುಪಯೋಗವಾಗಲಿ
ಚಿಕ್ಕಮಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರ ಹಲವಾರು ಯೋಜನೆಗಳನ್ನು ಕಲ್ಪಿಸಿದೆ. ಇದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ಉನ್ನತವಾದುದನ್ನು ಸಾಧಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಕರೆ ನೀಡಿದ್ದಾರೆ.
ಇತ್ತೀಚೆಗೆ ಮಲ್ಲಂದೂರು ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ 20 ಡೆಸ್ಕ್ ಮತ್ತು ಬೆಂಚ್ಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಉತ್ತಮ ಪ್ರತಿಭೆ ಇದ್ದರೂ ಅವರಿಗೆ ಸೂಕ್ತ ಅವಕಾಶ ಮತ್ತು ವೇದಿಕೆಗಳು ದೊರೆಯುತ್ತಿಲ್ಲ. ಶಿಕ್ಷಕರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಮಕ್ಕಳ ಪ್ರತಿಭೆಯನ್ನು ಗುರುತಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕು ಎಂದರು.
ಶೇಖರ್, ಸದಸ್ಯರಾದ ಕೆಂಚಯ್ಯ, ಮುಖ್ಯ ಶಿಕ್ಷಕಿ ಮಂಜುಳಮ್ಮ, ಬ್ಯಾರವಳ್ಳಿ ಗ್ರಾ.ಪಂ. ಅಧ್ಯಕ್ಷೆ ಸುಶೀಲ, ಮುಖ್ಯ ಶಿಕ್ಷಕ ವಸಂತಕುಮಾರ್ ಉಪಸ್ಥಿತರಿದ್ದರು.