ಪಪಂ ಚುನಾವಣೆ: ಬ್ಲಾಕ್ ಕಾಂಗ್ರೆಸ್ ಸಭೆ
ಮೂಡಿಗೆರೆ: ಪಪಂ ಚುನಾವಣೆ ತಯಾರಿ ನಡೆಸುವ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ಮನು ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ಕರೆಯಲಾಗಿದೆ.
ಜಿಲ್ಲಾ ಕಾಂಗ್ರೆಸ್ ವೀಕ್ಷಕ ಶ್ರೀನಿವಾಸ್, ಮಂಜುನಾಥ್ ಹಾಗೂ ಶಮಿಯುಲ್ಲಾ ಷರೀಫ್ ಭಾಗವಹಿಸಿದ್ದು, ಚುನಾವಣಾ ತಯಾರಿ ಕುರಿತು ಪಕ್ಷದ ಎಲ್ಲಾ ಮುಖಂಡರ ಸಮ್ಮುಖದಲ್ಲಿ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲಾಯಿತು ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಂಪತ್ ಕುಮಾರ್ ತಿಳಿಸಿದ್ದಾರೆ.
ಅವರು ಈ ಕುರಿತು ಹೇಳಿಕೆ ನೀಡಿದ್ದು, ಪಪಂ ಚುನಾವಣೆಯಲ್ಲಿ ಗೆಲುವು ಸಾಧಿಸುವ ಬಗ್ಗೆ ತಯಾರಿ ಹಾಗೂ ಪಕ್ಷ ಬಿಟ್ಟವರನ್ನು ಹಾಗೂ ದೂರ ಸರಿದವರನ್ನು ಮರಳಿ ಪಕ್ಷಕ್ಕೆ ಕರೆದು ಪಕ್ಷ ಬಲಿಷ್ಠಗೊಳಿಸುವ ಬಗ್ಗೆ ತೀರ್ಮಾನಿಸಲಾತು.
ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳಾಗಿ ಬಯಸುವವರು ಅರ್ಜಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.