ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಆಗುವುದಿಲ್ಲ

Lingaraj Badiger
Updated On : 18 Feb 2013, 10:54 am

ಕಡೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ಅಂಶಗಳ ಆಧಾರದ ಮೇಲೆ ನಡೆಯಲಿದ್ದು, ಇದರ ಫಲಿತಾಂಶ ವಿಧಾನಸಭಾ ಚುನಾವಣೆಗಳಿಗೆ ದಿಕ್ಸೂಚಿ ಆಗುವುದಿಲ್ಲ ಎಂದು ರಾಜ್ಯ ಜೆಡಿಎಸ್ ವಕ್ತಾರ ವೈ.ಎಸ್.ವಿ. ದತ್ತ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮಾರ್ಚ್ 7ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಿದ್ಧವಾಗಿದೆ. ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆಗಳನ್ನು ಚುನಾವಣಾ ಆಯೋಗ ತರಾತುರಿಯಲ್ಲಿ ಘೋಷಣೆ ಮಾಡಿದೆ.
ಆದರೆ ವಿಧಾನಸಭೆ ಚುನಾವಣೆಯತ್ತ ದೃಷ್ಟಿ ನೆಟ್ಟಿದ್ದ ರಾಜಕೀಯ ಪಕ್ಷಗಳಿಗೆ ಅನಿವಾರ್ಯವಾಗಿ ಈ ಚುನಾವಣೆ ಎದುರಾಗಿದೆ. ಬರುವ ಚುನಾವಣೆಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತದೆಯೇ ಹೊರತು 5 ಕೋಟಿ ಮತದಾರರು ಮತ ಚಲಾಯಿಸುವ ವಿಧಾನಸಭಾ ಚುನಾವಣೆಯ ಮೇಲೆ ಅಲ್ಲ ಎಂದರು.
ರಾಜ್ಯದಲ್ಲಿ ಜೆಡಿಎಸ್ ಏಕಾಂಗಿಯಾಗಿ ಹೋರಾಟ ಮಾಡುವ ಮೂಲಕ ಸ್ಥಳೀಯ ಸಂಸ್ಥೆ ಚುನಾವಣೆ ಕಣಕ್ಕಿಳಿಯಲಿದೆ. ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತು ವರಿಷ್ಟರಾದ ದೇವೇಗೌಡರ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು 21 ಹಾಗೂ 22 ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಚುನಾವಣಾ ಅವಧಿ ಕಡಿಮೆಯಿರುವುದರಿಂದ 19 ರಂದು ಕಣಕ್ಕೆ ಇಳಿಯುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಭಿ ಫಾರಂ ನೀಡಲಾಗುವುದು ಎಂದರು.
ಕಡೂರು ವಿಧಾನಸಭಾ ಕ್ಷೇತ್ರದ ಕಡೂರು ಹಾಗೂ ಬೀರೂರು ಪಟ್ಟಣದ ಎರಡು ಪುರಸಭೆಗಳ ಚುನಾವಣೆ ನಡೆಯಲಿದ್ದು, ತಲಾ 23 ವಾರ್ಡುಗಳಿವೆ. ಕಳೆದ ಭಾರಿ ಕಡೂರು ಪುರಸಭೆಯಲ್ಲಿ ಜೆಡಿಎಸ್ 14 ವಾರ್ಡುಗಳಲ್ಲಿ ಜಯಗಳಿಸಿತ್ತು.
ಸರ್ಕಾರದಿಂದ ಹೆಚ್ಚೆಚ್ಚು ಅನುದಾನ ತಂದು ಕಡೂರು ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ಈ ಮಾನದಂಡದ ಹಿನ್ನೆಲೆಯಲ್ಲಿ ಕಳೆದ ಭಾರಿಯಂತೆ ಕಡೂರು ಹಾಗೂ ಬೀರೂರು ಪಟ್ಟಣಗಳಲ್ಲಿ ತಾವು ಮನೆ ಮನೆಗೆ ತೆರಳಿ ಮತದಾರನ ಮನವೊಲಿಸುವ ಮೂಲಕ ಪಕ್ಷವನ್ನು ಬೆಂಬಲಿಸುವಂತೆ ಮತಯಾಚನೆ ಮಾಡುತ್ತೇನೆ ಎಂದು ಹೇಳಿದರು. ಗೋಷ್ಠಿಯಲ್ಲಿ ಭಂಢಾರಿ ಶ್ರೀನಿವಾಸ್, ಕೆ.ಎಚ್. ಲಕ್ಕಣ್ಣ, ಸೀಗೇಹಡ್ಲು ಹರೀಶ್, ಓಂಕಾರಪ್ಪ, ವೈ.ಬಿ.  ಈಶ್ವರಪ್ಪ, ಲಕ್ಕಪ್ಪ, ಪ್ರಭು, ಪಾಪಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement