ನೂತನ ಡಿಸಿ ಅಧಿಕಾರ ಸ್ವೀಕಾರ
ಚಿಕ್ಕಮಗಳೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವಿ. ಯಶವಂತ್ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿಕೊಂಡರು. ಈ ಹಿಂದಿನ ಜಿಲ್ಲಾಧಿಕಾರಿ ಎಸ್.ಟಿ. ಅಂಜನ್ಕುಮಾರ್ ಅವರು ಬೆಂಗಳೂರು ಮಹಾನಗರ ಪಾಲಿಕೆಗೆ ವರ್ಗಾವಣೆಗೊಂಡಿದ್ದು, ಅವರು ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಅವರಿಗೆ ಅಧಿಕಾರ ವಹಿಸಿ ತೆರಳಿದ್ದರು. ಉತ್ತರ ಭಾರತದ ಕೆಲವು ರಾಜ್ಯಗಳ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಆಗಿದ್ದ ವಿ. ಯಶವಂತ್ ಅವರು ಸೋಮವಾರ ಜಿಲ್ಲೆಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿಕೊಂಡರು. ವಿ. ಯಶವಂತ್ 1994ರಲ್ಲಿ ತರೀಕೆರೆ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ಕರ್ನಾಟಕ ಸೋಪ್ ಅಂಡ್ ಡಿಟಾರ್ಚ್ಡೆಂಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
--