ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲವು: ದತ್ತ ವಿಶ್ವಾಸ

Lingaraj Badiger
Updated On : 19 Feb 2013, 10:55 am

ಕಡೂರು: ಬರಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಡೂರು ಹಾಗು ಬೀರೂರು ಪಟ್ಟಣದ ಪುರಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಪಕ್ಷವು ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಹೇಳಿದರು.                                           
ತಾಲೂಕು ಯಗಟಿ ಗ್ರಾಮದಲ್ಲಿ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಹಾಗು ಆಕಾಂಕ್ಷಿಗಳ ಚುನಾವಣಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಬಿಜೆಪಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡುತ್ತಿದ್ದರು.                                                 
ಕಡೂರು ಹಾಗು ಬೀರೂರು ಪುರಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸುತ್ತಿದ್ದು, ಟಿಕೇಟ್ ಆಕಾಂಕ್ಷಿಗಳು ಅರ್ಜಿನೀಡಬೇಕು. ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ಜೆಡಿಎಸ್ ಸೇರ್ಪಡೆ: ಬಿಜೆಪಿ ಹಾಗು ಕಾಂಗ್ರೆಸ್‌ನಿಂದ ಮುಖಂಡರು ಜೆಡಿಎಸ್‌ಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಶಿವರತನ್ ಸಂಚೇತಿ ಹಾಗು ವಿಶ್ವ ಹಿಂದೂ ಪರಿಷತ್ತಿನ ಮುಖಂಡರಾದ ಮಹಾವೀರ ಸುರಾನ ಮತ್ತು ಬಿಜೆಪಿಯ ಹಿರಿಯ ಮುಖಂಡರಾದ ಬೀರೂರಿನ ಬಿ.ಆರ್.ಪಾಂಡುರಂಗರಾವ್, ಕಾಂಗ್ರೆಸ್ಸಿನ  ಬಿ.ಆರ್.ರವಿಕುಮಾರ್ ಸೇರಿದಂತೆ ವಿವಿಧ ಪಕ್ಷಗಳ ಅನೇಕ ಮುಖಂಡರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂದರು.
ಬೀರೂರನ್ನುತಾಲೂಕು ಕೇಂದ್ರ ಮಾಡಲು ಪ್ರಯತ್ನ  ಬೀರೂರು 43 ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣವಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆಯೇ ತಾಲೂಕು ಕೇಂದ್ರ ಮಾಡುವ ಪ್ರಯತ್ನಗಳು ನಡೆದಿವೆ.
ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ತಾಲೂಕು ಕೇಂದ್ರವಾಗಿಸಲು ಸಿಎಂಗೆ ಒತ್ತಾಯಿಸಲಾಗುವುದು ಎಂದು ದತ್ತ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement