ಬಂದ್ಗೆ ಹಮಾಲಿಗಳ ಬೆಂಬಲ
ಕಡೂರು: ಎಐಟಿಯುಸಿ ಕರೆ ನೀಡಿದ್ದ ಬಂದ್ಗೆ ಕಡೂರು ಪಟ್ಟಣದ ಹಮಾಲಿಗಳ ಸಂಘವು ಬೆಂಬಲ ವ್ಯಕ್ತಪಡಿಸುವ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದರು.
ಶ್ರೀ ವಿನಾಯಕ ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಹಾಗೂ ಉಪಾಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನನಿರತ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಎಂಪಿಎಂಸಿ ಮುಂದೆ ಪ್ರತಿಭಟಿಸಿದ ಪ್ರತಿಭಟನಕಾರರನ್ನು ಉದ್ದೇಶಿಸಿ ಸಂಘದ ಅಧ್ಯಕ್ಷ ತಿಮ್ಮಯ್ಯ ಮಾತನಾಡಿ, ಕಡೂರಿನ ಈ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಕಾರ್ಮಿಕರು ಹಮಾಲಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ತಮಗೆ ಎಪಿಎಂಸಿಯಿಂದ ಯಾವುದೇ ಮೂಲ ಸವಲತ್ತು ದೊರಕುತ್ತಿಲ್ಲ ಎಂದು ಹೇಳಿದರು.
ನಮ್ಮ ಬೇಡಿಕೆಗಳ ಈಡೇರಿಕೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲದೆ ಹಮಾಲಿಗಳಿಗಾಗಿ ಒಂದು ಕೊಠಡಿಯನ್ನೂ ನೀಡಿ ಎಂದರೂ ಕೂಡ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾರ್ಯದರ್ಶಿ ದೀಪು, ಶಾರದಮ್ಮ, ಉಮೇಶ್, ಅಶೋಕ್, ಸೀನಪ್ಪ ಮೊದಲಾದವರು ಉಪಸ್ಥಿತರಿದ್ದರು.