ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರೈಲ್ವೆ ಸೇತುವೆ: ಪೂರ್ಣಗೊಳಿಸಿ

Lingaraj Badiger
Updated On : 25 Feb 2013, 11:43 am

ಚಿಕ್ಕಮಗಳೂರು: ಹಿರೇಮಗಳೂರು ರೈಲ್ವೆ ಮೇಲುಸೇತುವೆ ಮೇಲೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಂಡು ಮುಂದಿನ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವಿ. ಯಶವಂತ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರೈಲ್ವೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸೋಮವಾರವೇ ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಅಗತ್ಯ ಬಿದ್ದರೆ ತಜ್ಞರನ್ನು ಕರೆಸಿ ಸೇತುವೆಯನ್ನು ಪರಿಶೀಲನೆ ನಡೆಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮತ್ತೆ ಇದೇ ರೀತಿ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು. ವಿದ್ಯುತ್ ಅಡಚಣೆಯಿಂದ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಸುವ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ, ಕುಡಿಯುವ ನೀರು ಸರಬರಾಜು ಸ್ಥಾವರಕ್ಕೆ ಎಕ್ಸ್‌ಪ್ರೆಸ್ ವಿದ್ಯುತ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement