ಕಾರಾಗೃಹ ಆವರಣದಲ್ಲಿ ಕಾನೂನು ಅರಿವು
ನರಸಿಂಹರಾಜಪುರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರಕ್ಷಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಉಪ ಕಾರಾಗೃಹದ ಆವರಣದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.
ನ್ಯಾಯಧೀಶ ಹಾಗೂ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಸಿ. ವೀರಭದ್ರಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಆರೋಪಿಗಳ ಹಕ್ಕು ಮತ್ತು ಹಿತಾಸಕ್ತಿ ಬಗ್ಗೆ ಮಾಹಿತಿ ನೀಡಿದರು. ಹಿರಿಯ ವಕೀಲ ಎಚ್.ಆರ್. ವೆಂಕಟೇಶಮೂರ್ತಿ ಉಪನ್ಯಾಸ ನೀಡಿ, ಆರೋಪಿಗಳು ತಾವು ಮಾಡಿದ ತಪ್ಪಿಗೆ ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ನೀಡುವ ಮೂಲಕ ಶಿಕ್ಷೆಯ ಪ್ರಮಾಣ ಕಡಿತ ಮಾಡಿಕೊಳ್ಳಬಹುದು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘಧ ಅಧ್ಯಕ್ಷ ಜಯಪ್ರಕಾಶ್ ಮಾತನಾಡಿ, ಆರೋಪಿಗಳು ಸನ್ನಡತೆಯಿಂದ ಬಾಳಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಉಪ ಕಾರಾಗೃಹದ ಅಧೀಕ್ಷಕ ಶಿವಮೂರ್ತಿ ಉಪಸ್ಥಿತರಿದ್ದರು.
ಸಿಬ್ಬಂದಿ ಹಾಗೂ ಖೈದಿಗಳು ಹಾಜರಿದ್ದರು. ಪೌಲ್ ಚೆರಿಯನ್ ಸ್ವಾಗತಿಸಿ, ಕೆ.ಎಸ್. ಸಂತೋಷ್ ಕುಮಾರ್ ಕಾರ್ಯಕ್ರಮನಿರೂಪಿಸಿದರು.