ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

Rashmi Kasaragodu
Updated On : 26 Feb 2013, 11:37 am

ದಾವಣಗೆರೆ: ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ 20 ವರ್ಷದ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರ ವಲಯದ ಬಸವ ಬುದ್ಧ ಭೀಮ ನಗರದಲ್ಲಿ ನಡೆದಿದೆ.
ನಗರದ ಬಸವ ಬುದ್ಧ ಭೀಮ ನಗರ ವಾಸಿ ನೇತ್ರಾವತಿ (20 ವರ್ಷ) ಆತ್ಮಹತ್ಯೆ ಮಾಡಿಕೊಂಡವರು.
ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದ ಈಕೆಗೆ 1 ತಿಂಗಳ ಹಿಂದಷ್ಟೇ ವಿವಾಹ ನಿಶ್ಚಯವಾಗಿತ್ತು. ಆದರೆ,  ಮಾನಸಿಕವಾಗಿ ಜಿಗುಪ್ಸೆಗೊಂಡಿದ್ದ ಆಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಮೃತಳ ತಾಯಿ ರಾಧಮ್ಮ ಗಣೇಶ ನೀಡಿದ ದೂರಿನ ಮೇರೆಗೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು,  ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement