ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ವಿಧಾನಸಭೆ ಚುನಾವಣೆ ಮೇಲೆ ಪ್ರಭಾವವಿಲ್ಲ'

Rashmi Kasaragodu
Updated On : 26 Feb 2013, 11:33 am

ಶೃಂಗೇರಿ: ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಗಳ ಫಲಿತಾಂಶ ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಅಭಿಪ್ರಾಯಪಟ್ಟರು.
ಪಟ್ಟಣದ ಅದ್ವೈತ ಲ್ಯಾನ್ಸರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಟ್ಟಣ ಪಂಚಾಯಿತಿ ಚನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದು, ನಮಗೆ ಬಹುಮತ ಸಿಗಲಿದೆ. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿಯೂ ಜೆಡಿಎಸ್ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರ ನೈರ್ಮಲೀಕರಣ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತದೆ. ನಮ್ಮ ಪಕ್ಷದ ಅಭ್ಯರ್ಥಿಗಳು ಜನರ ಸಮಸ್ಯೆಗಳಿಗೆ ಪ್ರಾಮಾಣಿಕ ಸ್ಪಂದನೆ ನೀಡಲಿದ್ದಾರೆ ಎಂದು ಹೇಳಿದರು.
ಕ್ಷೇತ್ರದ ಶಾಸಕರು ಸಚಿವರಾಗಿ ಕೇವಲ ಓಡಾಡುವುದರಲ್ಲಿಯೇ ಕಾಲ ಕಳೆಯುವುದಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬಿಜೆಪಿ, ಕಾಂಗ್ರೆಸ್ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಕೇಂದ್ರದ ನಾಯಕರು ಸಾಲ ಮನ್ನಾ, ಗೋರಕ್‌ಸಿಂಗ್ ವರದಿ ಅನುಷ್ಠಾನ ಇತ್ಯಾದಿ ಭರವಸೆ ನೀಡಿ ರೈತರನ್ನು ವಂಚಿಸಿವೆ ಎಂದರು.
ತಾಲೂಕು ಅಧ್ಯಕ್ಷ ಜಿ.ಜಿ. ಮಂಜುನಾಥ್, ರಮೇಶ್, ರಾಜೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement