ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಮಾಜದ ಬಗ್ಗೆ ಕಳಕಳಿ ಬೆಳೆಸಿಕೊಳ್ಳಿ: ಡಾ. ಹರ್ಷ

Rashmi Kasaragodu
Updated On : 26 Feb 2013, 11:34 am


ತರೀಕೆರೆ: ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ವಿಕಸನದ ತರಬೇತಿ ಅವಶ್ಯಕ. ಗುರಿ ಸಾಧಿಸುವಲ್ಲಿ ಎದುರಾಗುವ ಅಡೆತಡೆಗಳನ್ನು ಲೆಕ್ಕಿಸದೆ ಮುನ್ನುಗ್ಗಬೇಕು, ಪ್ರತಿಯೊಬ್ಬರೂ ಸಮಾಜದ ಬಗ್ಗೆ ಕಳಕಳಿ ಹೊಂದಿರಬೇಕು ಎಂದು ಅರುಣೋದಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಹರ್ಷ ಕಿವಿಮಾತು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸರ್ಕಾರಿ ಪ್ರಾಯೋಜಿತ ವಿಕಸನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಧೀಮಂತರಾದ ವಿವೇಕಾನಂದ, ಗಾಂಧೀಜಿ ಇಂತಹವರ ಜೀವನಶೈಲಿಯನ್ನು ಮಾದರಿಯಾಗಿಟ್ಟುಕೊಂಡು ಜೀವನದಲ್ಲಿ ಗುರಿ ಸಾಧಿಸಬೇಕು ಎಂದು ತಿಳಿಸಿದರು.
ಪ್ರಾಚಾರ್ಯ ಅಲಿಸ್ ಡಿಕಾಸ್ಟ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮವನ್ನು  ಯಶಸ್ವಿಗೊಳಿಸಿದ್ದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು. ಸಂಯೋಜನಾಧಿಕಾರಿಗಳಾದ ಎಸ್. ಪಂಕಜ, ಡಾ. ಲತಾಕುಮಾರಿ, ತರಬೇತುದಾರ ಯಶವಂತ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement