ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಂಸ್ಕೃತದಿಂದ ಸುಸಂಸ್ಕೃತ ಸಮಾಜ ನಿರ್ಮಾಣ

Lingaraj Badiger
Updated On : 27 Feb 2013, 11:04 am

ಬಾಳೆಹೊನ್ನೂರು: ಭಾರತೀಯ ಭಾಷೆಗಳಲ್ಲಿ ಸಂಸ್ಕೃತಕ್ಕೆ ವಿಶಿಷ್ಠ ಸ್ಥಾನವಿದ್ದು, ಸಂಸ್ಕೃತ ಜ್ಞಾನದ ಅರಿವು ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಬಾಳೆಹೊನ್ನೂರಿನ ರಂಭಾಪುರೀ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಶ್ರೀ ಹೇಳಿದ್ದಾರೆ.
 ರಂಭಾಪುರೀ ಪೀಠದ ರುದ್ರಮುನೀಶ್ವರ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ ಸಂಸ್ಕೃತ ಶಿಕ್ಷಕರ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ, ಆಶೀರ್ವಚನ ನೀಡಿದರು.
 ಮಠಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಂದ ಸಂಸ್ಕೃತ ಭಾಷೆ ಉಳಿದು ಬಂದಿದೆ ಎಂದರೆ ತಪ್ಪಾಗಲಾರದು. ರಾಜ್ಯ ಮಟ್ಟದ ಸಂಸ್ಕೃತ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ರಂಭಾಪುರೀ ಪೀಠದ ಪರಿಸರದಲ್ಲಿ ನಡೆಯುತ್ತಿರುವುದು ತಮಗೆ ಸಂತಸ ತಂದಿದೆ ಎಂದು ರಂಭಾಪುರೀ ಶ್ರೀ ಹೇಳಿದರು.
 ಅಧ್ಯಕ್ಷತೆ ವಹಿಸಿದ್ದ ಕಾರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಡಾ. ಮಲ್ಲೇಪುರಂ ಜಿ. ವೆಂಕಟೇಶ್ ಮಾತನಾಡಿದರು. ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಂಸ್ಕೃತ ಮಹಾಪಾಠಶಾಲೆಯ ಪ್ರಾಚಾರ್ಯ ಪ್ರೊ. ವಿ.ಜಿ. ಹೆಗ್ಡೆ  ಸಂಸ್ಕೃತಿ ಮತ್ತು ಸಂಸ್ಕೃತ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರಯ್ಯ ಪ್ರಾಸ್ತಾವಿಕ ಮಾತನಾಡಿದರು. ಎಂ.ಸಿ. ಭೋಜಯ್ಯ ಮನವಿ ಪತ್ರ ವಾಚಿಸಿದರು.
 ರುದ್ರಮುನಿ ಶಿವಾಚಾರ್ಯ ಶ್ರೀ ಹಲಗೂರು, ಶಿವಮಹಾಂತ ಶಿವಾಚಾರ್ಯ ಶ್ರೀ ಹೂಲಿ, ಹೊಸಕೆರೆ  ತ್ರಿಪುರಾಂತಕ ಮಠದ ಸದಾಶಿವ ಶಿವಾಚಾರ್ಯ ಮತ್ತು ಮಹಲಿಂಗ ಪ್ರಭು ಶಿವಾಚಾರ್ಯರು ಉಪಸ್ಥಿತರಿದ್ದರು. ರಾಮಚಂದ್ರ ಟಿ. ಭಟ್ ಸ್ವಾಗತಿಸಿದರು, ರಂಗಣ್ಣ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement