ಕಾಂಗ್ರೆಸ್‌ಗೆ ಅಧಿಕಾರದ ಚುಕ್ಕಾಣಿ: ಮಹೇಶ್
ಕಡೂರು: ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಡೂರು ಹಾಗೂ ಬೀರೂರು ಪುರಸಭೆಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಬಗ್ಗೆ ಹೇಳಿಕೆ ನೀಡಿದ ಮಹೇಶ್, ಚುನಾವಣೆಯು ನಮ್ಮ ನಾಯಕರಾದ ಕೆ.ಬಿ. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ನಡೆಯಲಿದ್ದು, ಎರಡೂ ಪುರಸಭೆಗಳ ಆಡಳಿತವು ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂದರು.
ಇತ್ತ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕರಿದ್ದು, ಅನುದಾನ ತಂದರೂ ಪಟ್ಟಣದ ಅಭಿವೃದ್ಧಿ ಹಿತದೃಷ್ಟಿಯಿಂದ ಅನುದಾನದ ವಿನಿಯೋಗ ಸರಿಯಾಗಿ ಆಗುವತ್ತ ಶಾಸಕರು ಗಮನಹರಿಸದಿರುವುದು ಬಿಜೆಪಿಯನ್ನೂ ತಿರಸ್ಕರಿಸಿಲಿದ್ದಾರೆ ಎಂದು ಅಭಿಪ್ರಾಯಪಟ್ಟರು.