ಡಿಕ್ಕಿ: 3 ಗಾಯ
ಕಡೂರು: ಪ್ರವಾಸಕ್ಕೆಂದು ತೆರಳಿದ್ದ ಕ್ವಾಲಿಸ್ ವಾಹನವೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ಸಿದ್ದರಹಳ್ಳಿಯ ಧನಪಾಲ ಮತ್ತು ಇತರರು ಕ್ವಾಲಿಸ್ ವಾಹನದಲ್ಲಿ ತಮಿಳುನಾಡಿಗೆ ಪ್ರವಾಸಕ್ಕೆಂದು ಕಡೂರು ಮಾರ್ಗವಾಗಿ ತೆರಳುತ್ತಿರುವಾಗ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಎದುರುಗಡೆಯಿಂದ ಬಣವೆಯ ಬೆಂಕಿ ನಂದಿಸಲು ಕಡೂರಿನಿಂದ ಯಳ್ಳಂಬಳಸೆ ಗ್ರಾಮಕ್ಕೆ ತೆರಳುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಕ್ವಾಲಿಸ್ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಸಂಭವಿಸಿದೆ.
ಚಾಲಕ ಷಣ್ಮುಗ, ಈಶ್ವರಮ್ಮ, ಧನಪಾಲ ಗಾಯಗೊಂಡಿದ್ದು, ಚಾಲಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಾಯಾಳುಗಳು ಕಡೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.