ಕ್ರಿಕೆಟ್: 3ರಂದು ಆಟಗಾರರ ಆಯ್ಕೆ ಪ್ರಕ್ರಿಯೆ
ಚಿಕ್ಕಮಗಳೂರು: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ಬೇಸಿಗೆ ತರಬೇತಿ ಶಿಬಿರಕ್ಕಾಗಿ 16 ರಿಂದ 19 ವರ್ಷದೊಳಗಿನ ಬಾಲಕರ ಕ್ರಿಕೆಟ್ ಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಗರದಲ್ಲಿ ಮಾ. 3 ರಂದು ನಡೆಸಲಾಗುತ್ತಿದೆ ಎಂದು ವಲಯ ಸಂಚಾಲಕ ಕೆ.ಎನ್. ಪ್ರಭಾಕರ್ ತಿಳಿಸಿದ್ದಾರೆ.
ಶಿವಮೊಗ್ಗ ವಲಯ ವ್ಯಾಪ್ತಿಯಲ್ಲಿ ಬರುವ ಚಿಕ್ಕಮಗಳೂರು ನಗರದಲ್ಲಿ ಆಯ್ಕೆ ಪ್ರಕ್ರಿಯೆ ಬಯಸುವಂತ ಬಾಲಕರು ಜನ್ಮ ದೃಢೀಕರಣ ಪತ್ರ ಸೇರಿದಂತೆ ವಿವಿಧ ದಾಖಲೆಗಳೊಂದಿಗೆ ಮಾ. 3 ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 12.30 ಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಕಾಡೆಮಿ ವತಿಯಿಂದ 2 ತಿಂಗಳ ಕಾಲ ಉಚಿತ ತರಬೇತಿ ನೀಡಲಾಗುವುದು. ರಾಜ್ಯದ 29 ಜಿಲ್ಲೆಗಳಲ್ಲಿ ಈ ಶಿಬಿರವನ್ನು ಏಕ ಕಾಲಕ್ಕೆ ಹಮ್ಮಿಕೊಳ್ಳುವ ಮೂಲಕ ಕ್ರೀಡಾಪಟುಗಳ ಪ್ರತಿಭೆಗೆ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಆಸಕ್ತರು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9900144223 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದ್ದು, ವಿವಿಧ ವಯೋವುತಿ ಬಾಲಕರ ಕ್ರಿಕೆಟ್ ಪಟುಗಳ ಆಯ್ಕೆ ಪ್ರಕ್ರಿಯೆ ಇದಾಗಿದೆ.
ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.